ಬಿ ಫಾರ್ಮ್ ಪಡೆದು ದೇವೇಗೌಡರ ಮುಂದೆ ಗಳಗಳನೆ ಅತ್ತ ನಿಖಿಲ್ ಕುಮಾರಸ್ವಾಮಿ!
ರಾಮನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಹೋಗುವ ವೇಳೆ ನಿಖಿಲ್ ಕುಮಾರಸ್ವಾಮಿ ಅವರ ನಿವಾಸದಲ್ಲಿ ಭಾವುಕ ವಾತಾವರಣ ಸೃಷ್ಟಿಯಾಗಿತ್ತು.

ಬೆಂಗಳೂರು: ರಾಮನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಹೋಗುವ ವೇಳೆ ನಿಖಿಲ್ ಕುಮಾರಸ್ವಾಮಿ ಅವರ ನಿವಾಸದಲ್ಲಿ ಭಾವುಕ ವಾತಾವರಣ ಸೃಷ್ಟಿಯಾಗಿತ್ತು.
ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬಿ ಫಾರ್ಮ್ ಪಡೆದುಕೊಳ್ಳುವ ವೇಳೆ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ತಂದೆ ಎಚ್.ಡಿ.ಕುಮಾರಸ್ವಾಮಿ, ತಾಯಿ ಅನಿತಾ ಕುಮಾರಸ್ವಾಮಿ ಅವರ ಜತೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಮಾಜಿ ಪ್ರಧಾನಿ ದೇವೇಗೌಡ ಅವರಿಂದ ಬಿ ಫಾರ್ಮ್ ಪಡೆದುಕೊಂಡರು.
ಚುನಾವಣೆಯಲ್ಲಿ ಗೆಲುವು ಸಾಧಿಸಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಚೆನ್ನಮ್ಮರ ಆಶೀರ್ವಾದ ಪಡೆದರು. ನಿಖಿಲ್ ಕುಮಾರಸ್ವಾಮಿ ಬಿ ಫಾರಂ ಪಡೆಯುವ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ, ಹಾಗೂ ಪತ್ನಿ ರೇವತಿ ಭಾಗಿಯಾಗಿದ್ದರು
ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಜೆಡಿಎಸ್ ಹಾಗೂ ಕಾಂಗ್ರೇಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದರು.
ಬೆಳಗ್ಗೆ 10 ಗಂಟೆಗೆ ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚರ್ಚ್ ಹಾಗೂ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೃಹತ್ ಮೆರವಣಿಗೆ ತೆರಳಿ ಮಧ್ಯಾಹ್ನ 12:30ಕ್ಕೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ನಾಮಪತ್ರದ ಬಳಿಕ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ಮಧ್ಯಾಹ್ನ1 ಗಂಟೆಗೆ ಕೆಂಗಲ್ ಆಂಜನೇಯ ಸ್ವಾಮಿ ದೇವಾಯದಲ್ಲಿ ಪೂಜೆ ಸಲ್ಲಿಸಿ, ಚನ್ನಪಟ್ಟಣದ ದರ್ಗಾ ಹಾಗೂ ಚರ್ಚ್ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶೇರವಾ ಹೋಟೆಲ್ ವೃತ್ತದಿಂದ ತಾಲೂಕು ಕಚೇರಿ ವರೆಗೆ ಬೃಹತ್ ಮೆರವಣಿಗೆಯಲ್ಲಿ ಸಾಗಿ, ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


