ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ; ಶೆಟ್ಟರ್ ಸೇರಿ 7 ಜನರಿಗೆ ಟಿಕೆಟ್
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಮಂಗಳವಾರ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ್ದು, ಭಾನುವಾರ ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಮಂಗಳವಾರ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ್ದು, ಭಾನುವಾರ ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಏಳು ಜನರಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಅವರನ್ನು ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಹುಬ್ಬಳ್ಳಿ-ಧಾರಣವಾಡ ಪಶ್ಚಿಮ ಕ್ಷೇತ್ರದಿಂದ ದೀಪಕ್ ಚಿಂಚೋರೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ಲಿಂಗಸೂರು ಕ್ಷೇತ್ರದಿಂದ ದುರ್ಗಪ್ಪ ಎಸ್ ಹೂಲಗೇರಿ, ಶಿಗ್ಗಾಂವಿಯಿಂದ ಮೊಹಮ್ಮದ್ ಯೂಸುಫ್ ಸವಣೂರು, ಹರಿಹರದಿಂದ ನಂದಗಾವಿ ಶ್ರೀನಿವಾಸ್, ಚಿಕ್ಕಮಗಳೂರು ಕ್ಷೇತ್ರದಿಂದ ಎಚ್.ಡಿ.ತಮ್ಮಯ್ಯ ಹಾಗೂ ಶ್ರವಣಬೆಳಗೊಳದಿಂದ ಎಂ.ಎ.ಗೋಪಾಲಸ್ವಾಮಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.
ಒಟ್ಟು 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 216 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು 8 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಾಕಿ ಉಳಿಸಿಕೊಂಡಿದೆ.
ಬೆಂಗಳೂರಿನ ಪುಲಿಕೇಶಿನಗರ, ಸಿ.ವಿ.ರಾಮನ್ನಗರ, ಕೆ.ಆರ್.ಪುರಂ, ಹಾಸನ ಜಿಲ್ಲೆ ಅರಕಲಗೂಡು, ಕೋಲಾರ ಜಿಲ್ಲೆ ಮುಳಬಾಗಿಲು ಕ್ಷೇತ್ರ, ರಾಯಚೂರು ನಗರ ಕ್ಷೇತ್ರ, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರ, ಮಂಗಳೂರು ಉತ್ತರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯನ್ನು ಕಾಂಗ್ರೆಸ್ ಬಾಕಿ ಉಳಿಸಿಕೊಂಡಿದೆ.
ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


