ವರುಣಾ: ಬಿಜೆಪಿಯ ಹರಕೆಯ ಕುರಿ, ಮನೆ ಮಗನ ನಡುವಿನ ಚುನಾವಣೆ- ಸಿದ್ದರಾಮಯ್ಯ
ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡುವ ಮೂಲಕ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡುವ ಮೂಲಕ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣನವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾಕ್ಕೆ ಕರೆತಂದು ಕಣಕ್ಕಿಳಿಸಿದೆ.ಇದು ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆಯಾಗಿದೆ ಎಂದಿದ್ದಾರೆ.
ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ನನ್ನ ಜನ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಿದ್ದರಾಮಯ್ಯ. ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು? ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


