1,609 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಎಂಟಿಬಿ ನಾಗರಾಜ್ ಮೊದಲನೇ, ಡಿಕೆ ಶಿವಕುಮಾರ್ ಎರಡನೇ ಶ್ರೀಮಂತ ರಾಜಕಾರಣಿ!
ಸಚಿವ ಎನ್ ನಾಗರಾಜ್ ಅಲಿಯಾಸ್ ಎಂಟಿಬಿ ನಾಗರಾಜ್ ಅವರು 1,609 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೊಂದಿಗೆ ರಾಜ್ಯದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿ ಮುಂದುವರಿದಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಅವರ ಆಸ್ತಿ 400 ಕೋಟಿ ರೂ. ಏರಿಕೆಯಾಗಿದೆ.

ಬೆಂಗಳೂರು: ಸಚಿವ ಎನ್ ನಾಗರಾಜ್ ಅಲಿಯಾಸ್ ಎಂಟಿಬಿ ನಾಗರಾಜ್ ಅವರು 1,609 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೊಂದಿಗೆ ರಾಜ್ಯದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿ ಮುಂದುವರಿದಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಅವರ ಆಸ್ತಿ 400 ಕೋಟಿ ರೂ. ಏರಿಕೆಯಾಗಿದೆ.
2019ರ ಉಪಚುನಾವಣೆಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅವರು 1,200 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಬಹುಶಃ ಇವರು ದೇಶದ ಶ್ರೀಮಂತ ಶಾಸಕರಲ್ಲಿ ಒಬ್ಬರಾಗಿದ್ದಾರೆ.
1,400 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶ್ರೀಮಂತ ರಾಜಕಾರಣಿಗಳ ಸಾಲಿಗೆ ಸೇರಿದ್ದಾರೆ. ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಮತ್ತು ರಿಯಲ್ ಎಸ್ಟೇಟ್ ಮತ್ತು ಗ್ರಾನೈಟ್ ವ್ಯವಹಾರಗಳನ್ನು ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಆಕಾಂಕ್ಷಿ ಡಿಕೆಶಿ 19 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧ ಕನಕಪುರದಲ್ಲಿ ಕಣಕ್ಕಿಳಿದಿರುವ ಕಂದಾಯ ಸಚಿವ ಆರ್. ಅಶೋಕ ಅವರು 60 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಘೋಷಿಸಿದ್ದಾರೆ.
ಚುನಾವಣಾ ಆಯೋಗದ ಮುಂದೆ ಅಭ್ಯರ್ಥಿಗಳು ಸಲ್ಲಿಸಿದ ಅಫಿಡವಿಟ್‌ಗಳು ತಮ್ಮ ನಿವ್ವಳ ಆಸ್ತಿ ಮೌಲ್ಯವನ್ನು ಬಹಿರಂಗಪಡಿಸಿವೆ. 50 ಕೋಟಿಗೂ ಅಧಿಕ ಆಸ್ತಿ ಮೌಲ್ಯ ಹೊಂದಿರುವ ಹಲವಾರು ಅಭ್ಯರ್ಥಿಗಳಿದ್ದಾರೆ. ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಸ್ಪರ್ಧಿಸಿರುವ ಸಚಿವ ಮುನಿರತ್ನ ಅವರ ಆಸ್ತಿ 293 ಕೋಟಿ ರೂ., ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಸ್ತಿ ಮೌಲ್ಯ 181 ಕೋಟಿ ರೂ., ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಆಸ್ತಿ 76 ಕೋಟಿ ರೂ. ಆಗಿದೆ.
ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ನಿಖಿಲ್ 2.16 ಕೋಟಿ ಮೌಲ್ಯದ ರೇಂಜ್ ರೋವರ್, 2.90 ಕೋಟಿ ಮೌಲ್ಯದ ಲ್ಯಾಂಬರ್‌ಗಿನಿ ಅವೆಂಟಡಾರ್, ಎರಡು ವ್ಯಾನಿಟಿ ವ್ಯಾನ್‌ಗಳು, 80.51 ಲಕ್ಷ ಮೌಲ್ಯದ ಜಿಮ್ ಉಪಕರಣಗಳು ಮತ್ತು ಎರಡು ಕನ್ನಡ ಚಲನಚಿತ್ರಗಳ ಹಕ್ಕುಗಳನ್ನು ಹೊಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


