ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ, ಪುಲಿಕೇಶಿ ನಗರದಿಂದ ಎಸಿ ಶ್ರೀನಿವಾಸ್ ಕಣಕ್ಕೆ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಹಾಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬದಲಿಗೆ...

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಹಾಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬದಲಿಗೆ ಎ.ಸಿ. ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಲಾಗಿದೆ.
ಎಐಸಿಸಿ ಇಂದು ಮೂವರು ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಪ್ರಕಟಿಸಿದ್ದು, ಪುಲಿಕೇಶಿ ನಗರದಿಂದ ಎಸಿ ಶ್ರೀನಿವಾಸ್, ಕೆಆರ್ ಪುರಂ ವಿಧಾನಸಭಾ ಕ್ಷೇತ್ರದಿಂದ ಡಿಕೆ ಮೋಹನ್ ಬಾಬು ಹಾಗೂ ಮುಳಬಾಗಿಲು ಕ್ಷೇತ್ರದಿಂದ ಡಾ. ಬಿಸಿ. ಮುದ್ದು ಗಂಗಾಧರ ಅವರನ್ನು ಕಣಕ್ಕಿಳಿಸಿದೆ.
ಒಟ್ಟು 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಈಗಾಗಲೇ 219 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಾಕಿ ಉಳಿಸಿಕೊಂಡಿದೆ.
ಸಿ.ವಿ.ರಾಮನ್ನಗರ, ಹಾಸನ ಜಿಲ್ಲೆ ಅರಕಲಗೂಡು, ರಾಯಚೂರು ನಗರ ಕ್ಷೇತ್ರ, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರ, ಮಂಗಳೂರು ಉತ್ತರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯನ್ನು ಕಾಂಗ್ರೆಸ್ ಬಾಕಿ ಉಳಿಸಿಕೊಂಡಿದೆ.
ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


