ರಾಜಕೀಯ

ಕರ್ನಾಟಕ ಚುನಾವಣೆ: ಅಮಿತ್ ಶಾ ನಾಳೆ ಬೆಂಗಳೂರು ಭೇಟಿ, ದೇವನಹಳ್ಳಿಯಲ್ಲಿ ರೋಡ್ ಶೋ!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಸಿದ್ಧತೆ ಪರಿಶೀಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆಯಿಂದ ಎರಡು ದಿನ ಬೆಂಗಳೂರು ಭೇಟಿ ಕೈಗೊಂಡಿದ್ದು, ಚುನಾವಣಾ ಕಾರ್ಯತಂತ್ರ ರೂಪಿಸಲಿದ್ದಾರೆ. ಎಲೆಕ್ಷನ್ ವೇಳಾಪಟ್ಟಿ ಪ್ರಕಟವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ.

ಕರ್ನಾಟಕ ಚುನಾವಣೆ: ಅಮಿತ್ ಶಾ ನಾಳೆ ಬೆಂಗಳೂರು ಭೇಟಿ, ದೇವನಹಳ್ಳಿಯಲ್ಲಿ ರೋಡ್ ಶೋ!
ಅಮಿತ್ ಶಾ ಭೇಟಿಯ ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಸಿದ್ಧತೆ ಪರಿಶೀಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ  ನಾಳೆಯಿಂದ ಎರಡು ದಿನ ಬೆಂಗಳೂರು ಭೇಟಿ ಕೈಗೊಂಡಿದ್ದು, ಚುನಾವಣಾ ಕಾರ್ಯತಂತ್ರ ರೂಪಿಸಲಿದ್ದಾರೆ. ಎಲೆಕ್ಷನ್ ವೇಳಾಪಟ್ಟಿ ಪ್ರಕಟವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ. 

ಶುಕ್ರವಾರ ಮಧ್ಯಾಹ್ನ ಟಿಪ್ಪು ಸುಲ್ತಾನ್ ಜನ್ಮ ಸ್ಥಳವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಅಮಿತ್ ಶಾ ರೋಡ್ ನಡೆಸಲಿದ್ದು, ಪಕ್ಷದ ಅಭ್ಯರ್ಥಿ ಪಿಲ್ಲಾ ಮುನಿಶಾಮಪ್ಪ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ದೇವನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಮಾಜಿ ಕೇಂದ್ರ ಸಚಿವ ಕೆಹೆಚ್ ಮುನಿಯಪ್ಪ ಹಾಗೂ ಜೆಡಿಎಸ್ ನಿಂದ ಹಾಲಿ ಶಾಸಕ ಎಲ್. ಎನ್, ನಾರಾಯಣಸ್ವಾಮಿ ಸ್ಪರ್ಧಿಸಿದ್ದಾರೆ.  ಸಂಜೆ ಚುನಾವಣಾ ಸಿದ್ಧತೆಗೆ ಸಂಬಂಧಿಸಿದಂತೆ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.

ಶನಿವಾರ ಖಾಸಗಿ ವಾಹಿನಿಯೊಂದು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ, ತದನಂತರ ದೆಹಲಿಗೆ ವಾಪಸ್ಸಾಗಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.