ಬೆಂಗಳೂರು: ಭಾರೀ ಮಳೆ, ಅಮಿತ್ ಶಾ ರೋಡ್ ಶೋ ಮುಂದೂಡಿಕೆ
ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಶುಕ್ರವಾರ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಭಾರೀ ಮಳೆಯಿಂದಾಗಿ ರದ್ದಾಗಿದೆ.

ವಿಜಯಪುರ: ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಶುಕ್ರವಾರ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಭಾರೀ ಮಳೆಯಿಂದಾಗಿ ರದ್ದಾಗಿದೆ.
ಬಿಜೆಪಿ ಅಭ್ಯರ್ಥಿ ಪಿಳ್ಳ ಮುನಿಶಾಮಪ್ಪ ಅವರ ಪರವಾಗಿ ಮತಯಾಚಿಸಲು ಅಮಿತ್ ಶಾ ರೋಡ್ ಶೋಗೆ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ವಿಜಯಪುರದ ಶಿವಗಣೇಶ ಸರ್ಕಲ್ ನಿಂದ ಚನ್ನರಾಯಪಟ್ಟಣ ಸರ್ಕಲ್ ವರೆಗೂ ರೋಡ್ ಶೋ ನಡೆಸಲು ಸಿದ್ಧತೆಯಾಗಿತ್ತು.
ಆದರೆ, ಮಧ್ಯಾಹ್ನ 2 ಗಂಟೆ ಸುಮಾರಿಗೆ ಗುಡುಗು ಸಹಿತ ಭಾರೀ ಮಳೆ ಆರಂಭವಾದ ಹಿನ್ನೆಲೆಯಲ್ಲಿ ರಸ್ತೆಯಲ್ಲೆಲ್ಲಾ ನೀರು ತುಂಬಿ, ನಿರೀಕ್ಷಿತ ಪ್ರಮಾಣದಲ್ಲಿ ಜನರನ್ನು ಸೇರಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ರೋಡ್ ಶೋ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಮಿತ್ ಶಾ, ಪ್ರತಿಕೂಲ ಹವಾಮಾನದ ಹೊರತಾಗಿಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದಕ್ಕಾಗಿ ಅವರಿಗೆ ಕೃತಜ್ಞತೆಗಳು. ಪ್ರಚಾರಕ್ಕಾಗಿ ದೇವನಹಳ್ಳಿಗೆ ಶೀಘ್ರ ಭೇಟಿ ನೀಡುತ್ತೇನೆ. ಅವರ ಉತ್ಸಾಹ ಕರ್ನಾಟಕದ ಜನರ ಉತ್ಸಾಹ ಬಿಜೆಪಿ ಭಾರಿ ಅಂತರದಿಂದ ಗೆಲುವು ಸಾಧಿಸುತ್ತದೆ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


