ರಾಜಕೀಯ

'ಕೈ' ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಮ್ರಾನ್‌ ಪ್ರತಾಪ್‌ ಗಡಿಯಾ ಹೆಸರು: ಕಾಂಗ್ರೆಸ್ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

ರಾಜ್ಯಸಭಾ ಸದಸ್ಯ, ಉರ್ದು ಕವಿ ಇಮ್ರಾನ್‌ ಪ್ರತಾಪ್‌ ಗಡಿಯಾ ಅವರನ್ನು ಚುನಾವಣಾ ಪ್ರಚಾರಕರನ್ನಾಗಿ ನೇಮಿಸಿರುವ ಕಾಂಗ್ರೆಸ್ ವಿರುದ್ಧ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಸಮನ್ವಯ ಸಮಿತಿ ಅಧ್ಯಕ್ಷೆ ಶೋಭಾ ಕರಂದ್ಲಾಜೆ ಅವರು ಗುರುವಾರ ವಾಗ್ದಾಳಿ ನಡೆಸಿದರು.

'ಕೈ' ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಮ್ರಾನ್‌ ಪ್ರತಾಪ್‌ ಗಡಿಯಾ ಹೆಸರು: ಕಾಂಗ್ರೆಸ್ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ
ಶೋಭಾ ಕರಂದ್ಲಾಜೆ
Published On :

ಬೆಂಗಳೂರು: ರಾಜ್ಯಸಭಾ ಸದಸ್ಯ, ಉರ್ದು ಕವಿ ಇಮ್ರಾನ್‌ ಪ್ರತಾಪ್‌ ಗಡಿಯಾ ಅವರನ್ನು ಚುನಾವಣಾ ಪ್ರಚಾರಕರನ್ನಾಗಿ ನೇಮಿಸಿರುವ ಕಾಂಗ್ರೆಸ್ ವಿರುದ್ಧ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಸಮನ್ವಯ ಸಮಿತಿ ಅಧ್ಯಕ್ಷೆ ಶೋಭಾ ಕರಂದ್ಲಾಜೆ ಅವರು ಗುರುವಾರ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಪ್ರತಾಪ್‌ ಗಡಿಯಾ ಅವರು ದರೋಡೆಕೋರ ಅತೀಕ್ ಅಹಮದ್'ನನ್ನು ಹಾಡಿ ಹೊಗಳಿದ್ದ. ಇವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಳಿಸಿದೆ. ಈ ಮೂಲಕ ಕಾಂಗ್ರೆಸ್ ಸಮಾಜ ವಿರೋಧಿ ಮತ್ತು ದೇಶ ವಿರೋಧಿ ಅಂಶಗಳನ್ನು ಚುನಾವಣೆಯಲ್ಲಿ ಬಳಸುತ್ತಿದೆ ಎಂದು ಕಿಡಿಕಾರಿದರು.

ಅತೀಕ್ ವಿರುದ್ಧ ಕೊಲೆ, ಅತ್ಯಾಚಾರ, ಅಪಹರಣ ಸೇರಿದಂತೆ 102 ಪ್ರಕರಣಗಳನ್ನು ದಾಖಲಾಗಿದ್ದವು. ಈತ ಪ್ರತಾಪ್‌ ಗಡಿಯಾ ಮನೆಯಲ್ಲಿಯೇ ಇರುತ್ತಿದ್ದ ಎಂದು ಆರೋಪಿಸಿದ್ದಾರೆ.

ಟಿಪ್ಪು ಸುಲ್ತಾನ್ ಜಯಂತಿ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಕರ್ನಾಟಕದಲ್ಲಿದ್ದ ಪ್ರತಾಪ್‌ ಗಡಿಯಾ ಅವರು ಹಿಂದೂಗಳ ವಿರುದ್ಧ ಮುಸ್ಲಿಮರನ್ನು ಪ್ರಚೋದಿಸಲು ಪ್ರಯತ್ನಿಸಿದರು ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು "ಹಿಂದೂ ವಿರೋಧಿ" ಎಂದು ವಾಗ್ದಾಳಿ ನಡೆಸಿದರು.

ಈ ನಡುವೆ ಶೋಭಾ ಅವರ ಆರೋಪಗಳನ್ನು ಕಾಂಗ್ರೆಸ್ ನಿರಾಕರಿಸಿದ್ದಾರೆ. ಕಾಂಗ್ರೆಸ್ ವಕ್ತಾರ ಪ್ರೊ.ಗೌರವ್ ವಲ್ಲಭ್ ಅವರು, ಶೋಭಾ ಕರಂದ್ಲಾಜೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಅತೀಕ್ ಅಹ್ಮದ್ ಅವರೊಂದಿಗಿನ ಉತ್ತರ ಪ್ರದೇಶದ ಸಚಿವರ ಫೋಟೋ ಕುರಿತು ಜನರಿಗೆ ವಿವರ ನೀಡುವಂತೆ ಸವಾಲು ಹಾಕಿದ್ದಾರೆ.

ಅತೀಕ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಇತ್ತೀಚೆಗೆ ಪ್ರಯಾಗ್‌ರಾಜ್‌ನ ಆಸ್ಪತ್ರೆಯ ಹೊರಭಾಗದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.