ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 10 ನಾಮಪತ್ರ ತಿರಸ್ಕೃತ

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಶುಕ್ರವಾರ ನಡೆದ ನಾಮಪತ್ರಗಳ ಪರಿಶೀಲನೆಯ ನಂತರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ಮತ್ತು ಉಡುಪಿಯಲ್ಲಿ ಮೂರು ನಾಮಪತ್ರಗಳು ತಿರಸ್ಕೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 10 ನಾಮಪತ್ರ ತಿರಸ್ಕೃತ
ಸಂಗ್ರಹ ಚಿತ್ರ
Published On :

ಮಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಶುಕ್ರವಾರ ನಡೆದ ನಾಮಪತ್ರಗಳ ಪರಿಶೀಲನೆಯ ನಂತರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ಮತ್ತು ಉಡುಪಿಯಲ್ಲಿ ಮೂರು ನಾಮಪತ್ರಗಳು ತಿರಸ್ಕೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ 72 ಅಭ್ಯರ್ಥಿಗಳ ನಾಮಪತ್ರಗಳನ್ನು ಸ್ವೀಕರಿಸಲಾಗಿದ್ದು, ಉಡುಪಿಯಲ್ಲಿ ನಿಗದಿತ ನಮೂನೆಯ ಪ್ರಕಾರ ಪೂರ್ಣಗೊಂಡಿರುವ ಪತ್ರಗಳ ಸಂಖ್ಯೆ 39 ಆಗಿದೆ.

ಆರಂಭದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕ್ರಮವಾಗಿ 109 ಮತ್ತು 88 ನಾಮಪತ್ರಗಳು ಸಲ್ಲಿಕೆಯಾಗಿದ್ದವು.
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಒಂದು ಹಾಗೂ ಮಂಗಳೂರು ದಕ್ಷಿಣ, ಮಂಗಳೂರು ಮತ್ತು ಬಂಟ್ವಾಳ ಕ್ಷೇತ್ರಗಳಲ್ಲಿ ತಲಾ ಎರಡು ನಾಮಪತ್ರಗಳು ತಿರಸ್ಕೃತಗೊಂಡಿವೆ.

ಉಡುಪಿಯಲ್ಲಿ ಕುಂದಾಪುರ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ ಶಂಕರ ಅಂಕದಕಟ್ಟೆ, ಕಾರ್ಕಳ ಕ್ಷೇತ್ರಕ್ಕೆ ಉದಯಕುಮಾರ್ ಎಂ, ದಯಾನಂದ ಶೆಟ್ಟಿ ಅವರ ನಾಮಪತ್ರ ತಿರಸ್ಕೃತಗೊಂಡಿವೆ.

ಬೆಳ್ತಂಗಡಿಯಲ್ಲಿ ಹತ್ತು, ಮೂಡುಬಿದಿರೆಯಲ್ಲಿ ಒಂಬತ್ತು, ಮಂಗಳೂರು ನಗರ ಉತ್ತರದಲ್ಲಿ 12, ಮಂಗಳೂರು ನಗರ ದಕ್ಷಿಣ ಮತ್ತು ಮಂಗಳೂರಿನಲ್ಲಿ ತಲಾ ಎಂಟು, ಬಂಟ್ವಾಳದಲ್ಲಿ ಆರು, ಪುತ್ತೂರಿನಲ್ಲಿ 10 ಮತ್ತು ಸುಳ್ಯದಲ್ಲಿ ಒಂಬತ್ತು ನಾಮಪತ್ರಗಳು ನಿಗದಿತ ನಮೂನೆಯಲ್ಲಿದ್ದು, ಅಂಗೀಕಾರಗೊಂಡಿವೆ.

ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.