ವರುಣಾದಲ್ಲಿ ಪ್ರಚಾರ ಮಾಡಲ್ಲ ಎಂದಿದ್ದ ಸಿದ್ದುರನ್ನು ಕ್ಷೇತ್ರದತ್ತ ಕರೆತಂದ ಸೋಮಣ್ಣ: ಬಿಜೆಪಿ ಪ್ರಚಾರ ತಂತ್ರ
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ತಿಂಗಳು ಬಾಕಿ ಉಳಿದಿದ್ದು, ವರುಣಾ ಕ್ಷೇತ್ರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿಯ ಹಿರಿಯ ಸಚಿವ ವಿ. ಸೋಮಣ್ಣ ಅವರ ನಡುವಿನ ಪೈಪೋಟಿ ತೀವ್ರಗೊಂಡಿದೆ.

ಮೈಸೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ತಿಂಗಳು ಬಾಕಿ ಉಳಿದಿದ್ದು, ವರುಣಾ ಕ್ಷೇತ್ರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿಯ ಹಿರಿಯ ಸಚಿವ ವಿ. ಸೋಮಣ್ಣ ಅವರ ನಡುವಿನ ಪೈಪೋಟಿ ತೀವ್ರಗೊಂಡಿದೆ.
ಸೋಮಣ್ಣ ಮತ್ತು ಬಿಜೆಪಿಯ ತೀವ್ರ ಪ್ರಚಾರದಿಂದಾಗಿ ಸಿದ್ದರಾಮಯ್ಯ ಅವರು ಶನಿವಾರ ತಮ್ಮ ಕ್ಷೇತ್ರಕ್ಕೆ ಧಾವಿಸುವಂತೆ ಮಾಡಿದೆ.
ಈ ಹಿಂದೆ ವರುಣಾದಲ್ಲಿ ಪ್ರಚಾರ ಮಾಡುವ ಅಗತ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ, ಇದೀಗ ಶನಿವಾರ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕ್ಷೇತ್ರಕ್ಕೆ ಆಗಮಿಸಿ ಬೆಳಗ್ಗೆ 11ರಿಂದ ಸಂಜೆ 7ರವರೆಗೆ ಇಡೀ ದಿನ ಕ್ಷೇತ್ರದಲ್ಲಿ ಇರಲಿದ್ದಾರೆ.
ಕ್ಷೇತ್ರದಲ್ಲಿ ಬಿಜೆಪಿ ಒಗ್ಗಟ್ಟಿನ ಹೋರಾಟ ನಡೆಸುತ್ತಿದೆ. ಕ್ಷೇತ್ರದಲ್ಲಿ ಜನಪ್ರಿಯರಾಗಿರುವ ವಿಜಯೇಂದ್ರ ಕೂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಕೂಡ ವರುಣಾದಲ್ಲಿ ಸೋಮಣ್ಣ ಪರ ಪ್ರಚಾರ ನಡೆಸಿದ್ದಾರೆ.
ಇದನ್ನೂ ಓದಿ: ಮತದಾರರ ಓಲೈಸಲು 'ಲೋಕಲೈಟ್ ಕಾರ್ಡ್' ಬಳಸಿದ ಸಿದ್ದರಾಮಯ್ಯ
ಬಿಜೆಪಿಯು ಪ್ರತಿಷ್ಠಿತ ಕ್ಷೇತ್ರವನ್ನು ಗೆಲ್ಲಲು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ರಣತಂತ್ರ ರೂಪಿಸುತ್ತಿದ್ದಾರೆ.
ಬಿಜೆಪಿಯ ಆಕ್ರಮಣಕಾರಿ ಪ್ರಚಾರದ ಬಗ್ಗೆ ಸಿದ್ದರಾಮಯ್ಯ ಅವರು ಚಿಂತಿತರಾಗಿದ್ದಾರೆ ಮತ್ತು ಯಾವುದೇ ಅವಕಾಶಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಮೂಲಗಳು ವಿವರಿಸಿವೆ.
ಮುಖ್ಯಮಂತ್ರಿ ಹುದ್ದೆಗೆ ಹಪಹಪಿಸುತ್ತಿರುವ ಸಿದ್ದರಾಮಯ್ಯ ಅವರ ಸೋಲನ್ನು ಅವರದೇ ಪಕ್ಷದ ನಾಯಕರೇ ಖಚಿತಪಡಿಸಿಕೊಳ್ಳಲು ಷಡ್ಯಂತ್ರಗಳು ನಡೆಯುತ್ತಿವೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


