ಕಾಂಗ್ರೆಸ್ ಮತ್ತು ಜೆಡಿಎಸ್ ಜಾತಿ ರಾಜಕಾರಣವನ್ನು ಕೊನೆಗಾಣಿಸಿ: ಮತದಾರರಿಗೆ ಪ್ರತಾಪ್ ಸಿಂಹ
ಕಾಂಗ್ರೆಸ್ ಮತ್ತು ಜೆಡಿಎಸ್ ಜಾತಿ ರಾಜಕಾರಣವನ್ನು ಕೊನೆಗಾಣಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಮತದಾರರಿಗೆ ಶುಕ್ರವಾರ ಕರೆ ನೀಡಿದರು.

ಮೈಸೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಜಾತಿ ರಾಜಕಾರಣವನ್ನು ಕೊನೆಗಾಣಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಮತದಾರರಿಗೆ ಶುಕ್ರವಾರ ಕರೆ ನೀಡಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ವರುಣಾದಲ್ಲಿ ಪಕ್ಷ ಗೆಲುವು ಸಾಧಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಅವರ ಪುತ್ರ ಡಾ.ಯತೀಂದ್ರ ಪ್ರತಿನಿಧಿಸುತ್ತಿರುವ ಕ್ಷೇತ್ರವು ಸೂಕ್ತ ರೀತಿಯಲ್ಲಿ ಅಭಿವೃದ್ಧಿಯನ್ನು ಕಂಡಿಲ್ಲ. ಬಿಜೆಪಿಗೆ ಅವಕಾಶ ನೀಡಿದರೆ ವರುಣಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಮೂರು ತಾಲ್ಲೂಕುಗಳಾಗಿ ವಿಸ್ತರಿಸಿ ತಾಲ್ಲೂಕು ಕೇಂದ್ರವಾಗಿ ಘೋಷಣೆ ಮಾಡಲಾಗುವುದು ಎಂದು ಹೇಳಿದರು.
ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವಂತೆ ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡಿದ ಅವರು, ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ತಂಡವು ವರುಣಾ ಕ್ಷೇತ್ರದ ಜನರಿಗಾಗಿ ನಾನು ಜಾರಿಗೆ ತಂದ ಯೋಜನೆ ಕುರಿತು ತಪ್ಪು ಪ್ರಚಾರಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.
ಬೆಂಗಳೂರು-ಮೈಸೂರು ಹೆದ್ದಾರಿ ಯೋಜನೆಯನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯೋಜನೆಯನ್ನು ಉದ್ಘಾಟಿಸಿದರು. ಹಾಸನ, ಮಂಡ್ಯ ಮತ್ತು ಚಾಮರಾಜನಗರದಲ್ಲಿ ಬಿಜೆಪಿ ಪ್ರಬಲ ಮುಖಗಳನ್ನು ಮತ್ತು ಯುವಕರನ್ನು ಕಣಕ್ಕಿಳಿಸಿದ್ದು, ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


