ಪರಸ್ಪರ ಹೆಗಲ ಮೇಲೆ ಕೈ ಹಾಕಿಕೊಂಡು ಒಗ್ಗಟ್ಟಿನ ಸಂದೇಶ ರವಾನಿಸಿದ ಡಿಕೆಶಿ, ಸಿದ್ದು!
ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಣ ಬಣ ರಾಜಕೀಯ ಆಗಾಗ್ಗೆ ಸುದ್ದಿಯಾಗುತ್ತಲೇ ಇರುತ್ತದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ, ಟಿಕೆಟ್ ಹಂಚಿಕೆ, ಪ್ರಚಾರ, ಪಕ್ಷ ಸಂಘಟನೆ ಮತ್ತಿತರ ಎಲ್ಲಾ ಕಾರ್ಯಗಳಲ್ಲೂ ಈ ಇಬ್ಬರೂ ನಾಯಕರ ಪಾತ್ರ ಮಹತ್ವದ್ದಾಗಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಣ ಬಣ ರಾಜಕೀಯ ಆಗಾಗ್ಗೆ ಸುದ್ದಿಯಾಗುತ್ತಲೇ ಇರುತ್ತದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ, ಟಿಕೆಟ್ ಹಂಚಿಕೆ, ಪ್ರಚಾರ, ಪಕ್ಷ ಸಂಘಟನೆ ಮತ್ತಿತರ ಎಲ್ಲಾ ಕಾರ್ಯಗಳಲ್ಲೂ ಈ ನಾಯಕರ ಪಾತ್ರ ಮಹತ್ವದ್ದಾಗಿದೆ.
ಈ ಇಬ್ಬರೂ ನಾಯಕರು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳಾಗಿದ್ದು, ಈ ವಿಚಾರದಲ್ಲೂ ಪೈಪೋಟಿಯುಕ್ತ ಮಾತುಗಳು ಕೇಳಿ ಬರುತ್ತಿರುತ್ತದೆ. ಬಿಜೆಪಿ ಹಾಗೂ ಜೆಡಿಎಸ್ ಕೂಡಾ ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಆಗಿಂದ್ದಾಗೆ ಟೀಕಾ ಪ್ರಹಾರ ನಡೆಸುತ್ತವೆ.
ಇದೀಗ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಈ ಇಬ್ಬರೂ ನಾಯಕರು ಪರಸ್ಪರ ಹೆಗಲ ಮೇಲೆ ಕೈ ಹಾಕಿಕೊಂಡು ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ. ಈ ಫೋಟೋವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ವಿರೋಧಿಗಳು ಅದೆಷ್ಟೇ ಅಪಪ್ರಚಾರ ಮಾಡಬಹುದು, ಆದರೆ ಕಾಂಗ್ರೆಸ್ ಪಕ್ಷಕ್ಕೆ ಐಕ್ಯತೆ, ಏಕತೆ, ಒಗ್ಗಟ್ಟುಗಳೇ ಶಕ್ತಿ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಶಕ್ತಿಯೇ ವಿರೋಧಿಗಳ ನಿದ್ದೆಗೆಡಿಸಿದೆ. ಮುಂದೆ ಶಾಶ್ವತವಾಗಿ ನಿದ್ದೆಗೆಡಿಸಲಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


