ಲಿಂಗಾಯತ ಸಿಎಂ ಈಗಾಗ್ಲೆ ಇದ್ದಾರಲ್ಲಾ, ಅವ್ರೇ, ಭ್ರಷ್ಟಾಚಾರ ಮಾಡಿ ರಾಜ್ಯ ಹಾಳು ಮಾಡಿರೋದು: ಸಿದ್ದರಾಮಯ್ಯ ಎಡವಟ್ಟು
ಚುನಾವಣಾ ಪ್ರಚಾರದ ಭರಾಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ರಾಜಕಾರಣಿಗಳು ಉತ್ಸಾಹಭರಿತ ಹೇಳಿಕೆ ನೀಡುವುದು ಸರ್ವೇ ಸಾಮಾನ್ಯ. ಅದೇ ಕೆಲವೊಮ್ಮೆ ಅವರಿಗೆ ಅರಿವಿಲ್ಲದಂತೆ ಎಡವಟ್ಟಾಗಿರುತ್ತದೆ.

ಮೈಸೂರು: ಚುನಾವಣಾ ಪ್ರಚಾರದ ಭರಾಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ರಾಜಕಾರಣಿಗಳು ಉತ್ಸಾಹಭರಿತ ಹೇಳಿಕೆ ನೀಡುವುದು ಸರ್ವೇ ಸಾಮಾನ್ಯ. ಅದೇ ಕೆಲವೊಮ್ಮೆ ಅವರಿಗೆ ಅರಿವಿಲ್ಲದಂತೆ ಎಡವಟ್ಟಾಗಿರುತ್ತದೆ.
ಈಗ ಸಿದ್ದರಾಮಯ್ಯ ಅವರೂ ಅಂಥಹದ್ದೇ ಪರಿಸ್ಥಿತಿ ಎದುರಿಸುತ್ತಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ಸಿದ್ದರಾಮಯ್ಯ ಅವರನ್ನು ಸುದ್ದಿವಾಹಿನಿಯೊಂದರ ಪತ್ರಕರ್ತರು ಸಂದರ್ಶನ ಮಾಡುತ್ತಿದ್ದಾಗ, ಬಿಜೆಪಿ ನಾಯಕರು ಅಧಿಕಾರಕ್ಕೆ ಬಂದಲ್ಲಿ ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಈ ಲಿಂಗಾಯತ ಸಿಎಂ ಅಸ್ತ್ರಕ್ಕೆ ನಿಮ್ಮ ಪ್ರತಿಕ್ರಿಯೆ ಏನು?: ಎಂದು ಪ್ರಶ್ನಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ, ಈಗಾಗಲೇ ಲಿಂಗಾಯತರೇ ಮುಖ್ಯಮಂತ್ರಿಯಾಗಿದ್ದಾರಲ್ಲಾ, ಅವರೇ ಎಲ್ಲಾ ಭ್ರಷ್ಟಾಚಾರ ಮಾಡಿ ಹಾಳುಮಾಡಿರುವುದು ರಾಜ್ಯವನ್ನ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗುರಿಯಾಗಿದೆ. ಈ ಹೇಳಿಕೆ ಬೆನ್ನಲೇ ರಾಜ್ಯ ಬಿಜೆಪಿಯ ಸಾಮಾಜಿಕ ಜಾಲತಾಣ ಘಟಕ ಟ್ವೀಟ್ ಮಾಡಿದ್ದು, "ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ ಸಿದ್ದರಾಮಯ್ಯ, ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ. ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ". ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


