ಟಿಕೆಟ್ ಕೈ ತಪ್ಪಿದ ಬೇಸರ: ಜೆಡಿಎಸ್ಗೆ ಹೋಗದೆ ಬಿಜೆಪಿಯಲ್ಲೇ ಉಳಿಯುತ್ತೇನೆಂದ ನೆಹರೂ ಓಲೇಕಾರ್!
ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದರಿಂದ ಬೇಸರಗೊಂಡು ಜೆಡಿಎಸ್ಗೆ ಹೋಗುತ್ತೇನೆ ಎಂದಿದ್ದ ನೆಹರು ಓಲೇಕಾರ ಇದೀಗ ಯುಟರ್ನ್ ಹೊಡಿದಿದ್ದು, ಬಿಜೆಪಿಯಲ್ಲೆ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ಹಾವೇರಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದರಿಂದ ಬೇಸರಗೊಂಡು ಜೆಡಿಎಸ್ಗೆ ಹೋಗುತ್ತೇನೆ ಎಂದಿದ್ದ ನೆಹರು ಓಲೇಕಾರ ಇದೀಗ ಯುಟರ್ನ್ ಹೊಡಿದಿದ್ದು, ಬಿಜೆಪಿಯಲ್ಲೆ ಮುಂದುವರೆಯುವುದಾಗಿ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷ ಬಿಟ್ಟು ಹೋಗುತ್ತಿಲ್ಲ ಎಂದರು. ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಿಡಿಕಾರಿದ ಓಲೇಕಾರ್ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ ಎಂದು ಆರೋಪಿಸಿದರು.
ಪಕ್ಷ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ನನಗೆ ಬೇಸರವಾಗಿತ್ತು. ಆದರೆ ನಾನು ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಬಿಜೆಪಿ ಪಕ್ಷದಲ್ಲಿಯೇ ಇದ್ದೇನೆ. ಬೇರೆ ಯಾವ ಪಕ್ಷದ ಬಗ್ಗೆ ನನಗೆ ಒಲುವಿಲ್ಲ. ಬಿಜೆಪಿಯಲ್ಲೇ ಇದ್ದೇನೆ ಬಿಜೆಪಿಯಲ್ಲೇ ಇರುತ್ತೇನೆ. ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲು ಸಿಎಂ ಬೊಮ್ಮಾಯಿ ಬೇಡ ಎಂದಿದ್ದಾರೆ. ಬೊಮ್ಮಾಯಿ ಕರೆದರೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಹೇಳಿದರು.
ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹೋಗಿ ಅಲ್ಲಿ ಪಕ್ಷ ಸಂಘಟನೆ ಮಾಡಿ ಕಟ್ಟುವುದು ಸುಲಭವಲ್ಲ. ನಾವು ಇರುವ ಪಕ್ಷದಲ್ಲೇ ನಮಗೆ ಗೌರವವಿರುತ್ತದೆ. ಪದೇ ಪದೇ ಪಕ್ಷ ಬದಲಾವಣೆ ಮಾಡುತ್ತಿದ್ದರೆ ಗೌರವ ಇರುವುದಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


