ಪುಲಿಕೇಶಿನಗರ ಕ್ಷೇತ್ರ: ಏಕೈಕ ಎಐಎಡಿಎಂಕೆ ಅಭ್ಯರ್ಥಿ ನಾಮಪತ್ರ ವಾಪಸ್
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಕಣದಿಂದ ತಮಿಳುನಾಡಿನ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಹಿಂದೆ ಸರಿದಿದೆ.

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಕಣದಿಂದ ತಮಿಳುನಾಡಿನ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಹಿಂದೆ ಸರಿದಿದೆ.
ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಪುಲಿಕೇಶಿನಗರದಿಂದ ಏಕೈಕ ಎಐಎಡಿಎಂಕೆ ಅಭ್ಯರ್ಥಿಯಾಗಿ ಡಿ ಅನ್ಬರಸನ್ ನಾಮಪತ್ರ ಸಲ್ಲಿಸಿದ್ದರು. ಆದರೆ, ಬಿಜೆಪಿಯ ಮನವಿ ಮೇರೆಗೆ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಎಂದು ಪಕ್ಷ ಹೇಳಿದೆ.
ದೆಹಲಿಯ ಹಿರಿಯ ಬಿಜೆಪಿ ನಾಯಕರು ಪಳನಿಸ್ವಾಮಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಡಿ ಅನ್ಬರಸನ್ ನಾಮಪತ್ರ ಹಿಂಪಡೆಯುವಂತೆ ಮನವಿ ಮಾಡಿರುವುದಾಗಿ ಎಐಎಡಿಎಂಕೆ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.
ಬಿಜೆಪಿ ಮನವಿಗೆ ಮಣಿದ ಅನ್ಬರಸನ್ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ಹಾಗೂ ಬಿಜೆಪಿ ಮಿತ್ರ ಪಕ್ಷಗಳಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


