ರಾಜಕೀಯ

ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರ: ಬಿಎಸ್ ಪಿ ಟಿಕೆಟ್ ನಿಂದ ಅಖಂಡ ಶ್ರೀನಿವಾಸಮೂರ್ತಿ ಸ್ಪರ್ಧೆ

ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಟಿಕೆಟ್‌ನಲ್ಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರ: ಬಿಎಸ್ ಪಿ ಟಿಕೆಟ್ ನಿಂದ ಅಖಂಡ ಶ್ರೀನಿವಾಸಮೂರ್ತಿ ಸ್ಪರ್ಧೆ
ಅಖಂಡ ಶ್ರೀನಿವಾಸಮೂರ್ತಿ
Published On :

ಬೆಂಗಳೂರು: ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಟಿಕೆಟ್‌ನಲ್ಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ತಮ್ಮ ಕ್ಷೇತ್ರದ ಜನರ ಸಲಹೆ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಮೂರ್ತಿ  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. "ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ಬಿಎಸ್ಪಿ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತೇನೆ, ನನಗೆ  ಗೆಲ್ಲುವ ವಿಶ್ವಾಸವಿದೆ" ಎಂದು ಹೇಳಿದ್ದಾರೆ.

ಕಾಂಗ್ರೆಸ್ ಕ್ಷೇತ್ರದಿಂದ ಮಹದೇವಪುರದ ಎಸಿ ಶ್ರೀನಿವಾಸ ಅವರನ್ನು ಕಣಕ್ಕಿಳಿಸಿದೆ. ಮೂರ್ತಿ, 2018 ರಲ್ಲಿ 81,626 ಮತಗಳಿಂದ ಗೆದ್ದಿದ್ದರು. ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಜನತಾ ದಳ (ಜಾತ್ಯತೀತ) ಬಿ ಪ್ರಸನ್ನ ಕುಮಾರ್ ವಿರುದ್ಧ ಅತಿ ಹೆಚ್ಚು ಅಂತರದಲ್ಲಿ ಗೆಲುವು ಸಾಧಿಸಿದ್ದರು.

ಕಳೆದ ವಾರ ಮೂರ್ತಿ ಅವರು ಸುಮಾರು 2,36,000 ಜನಸಂಖ್ಯೆಯನ್ನು ಹೊಂದಿರುವ ಮೀಸಲು ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು, ಈ ಕ್ಷೇತ್ರದಲ್ಲಿ ಶೇ. 50 ರಷ್ಟು ಮುಸ್ಲಿಮರು ದಲಿತರು, ಹಿಂದೂಗಳು ಮತ್ತು ಇತರ ಸಮುದಾಯದವರಿದ್ದಾರೆ. ವಿಧಾನಸಭಾ ಕ್ಷೇತ್ರವು ಕಾವಲ್ಬೈರಸಂದ್ರ, ಎಸ್‌ಕೆ ಗಾರ್ಡನ್, ಡಿಜೆ ಹಳ್ಳಿ, ಮುನೀಶ್ವರನಗರ, ಕುಶಾಲನಗರ, ಸಗಾಯಪುರ ಮತ್ತು ಪುಲಕೇಶಿನಗರ ವಾರ್ಡ್‌ಗಳನ್ನು ಒಳಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.