ರಾಜಕೀಯ

ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ತಿರಸ್ಕರಿಸಿ: ಮತದಾರರಿಗೆ ಅಮಿತ್ ಶಾ ಕರೆ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ತಿರಸ್ಕರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಮತದಾರರನ್ನು ಒತ್ತಾಯಿಸಿದ್ದಾರೆ. ಅಲ್ಲದೇ, ಜಿಲ್ಲೆಯಲ್ಲಿ ಕನಿಷ್ಠ ನಾಲ್ವರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಅವರು ಮನವಿ ಮಾಡಿದರು.

ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ತಿರಸ್ಕರಿಸಿ: ಮತದಾರರಿಗೆ ಅಮಿತ್ ಶಾ ಕರೆ
ಅಮಿತ್ ಶಾ ರೋಡ್ ಶೋ
Published On :

ಸಕಲೇಶಪುರ: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ತಿರಸ್ಕರಿಸುವಂತೆ  ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಮತದಾರರನ್ನು ಒತ್ತಾಯಿಸಿದ್ದಾರೆ. ಅಲ್ಲದೇ,  ಜಿಲ್ಲೆಯಲ್ಲಿ ಕನಿಷ್ಠ ನಾಲ್ವರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಅವರು ಮನವಿ ಮಾಡಿದರು.

ಸಕಲೇಶಪುರದ ಆಲೂರಿನ ರೋಡ್ ಶೋ ವೇಳೆಯಲ್ಲಿ ಮಾತನಾಡಿದ ಅಮಿತ್ ಶಾ, ಭಾರೀ ಅಂತರದಿಂದ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ, ಡಬಲ್ ಎಂಜಿನ್ ಸರ್ಕಾರದ ಮುಖ್ಯಸ್ಥರಾಗಿರುವ ನರೇಂದ್ರ ಮೋದಿ ಅವರ ಕೈ ಬಲಪಡಿಸುವಂತೆ ಹೇಳಿದರು. ಪರೋಕ್ಷವಾಗಿ ಜೆಡಿಎಸ್ ಕಾಂಗ್ರೆಸ್ ನ ಬಿ ಟೀಂ ಎಂದು ಕರೆದ ಶಾ, ಒಂದು ವೇಳೆ ಜೆಡಿಎಸ್ ಗೆ ಮತ ನೀಡಿದರೆ ಅದು ಕಾಂಗ್ರೆಸ್ ಗೆ ಪ್ರಯೋಜನವಾಗಲಿದೆ ಎಂದರು. 

ವೀರಶೈವ ಲಿಂಗಾಯತ, ಒಕ್ಕಲಿಗ, ಒಬಿಸಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳದ ಬಿಜೆಪಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಅಮಿತ್ ಶಾ, ಜನರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ, ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು. ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಅವರನ್ನು ಗೆಲ್ಲಿಸಿದ್ದರೆ ಸಕಲೇಶಪುರದ ಎಲ್ಲಾ ವಲಯದಲ್ಲಿ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.

ಜೆಡಿಎಸ್ ಪ್ರಾಬಲ್ಯದ ಕ್ಷೇತ್ರದಲ್ಲಿ ಅಮಿತ್ ಶಾ ರೋಡ್ ಶೋಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಆಲೂರಿನ ಬಿಜೆಪಿ ಕಾರ್ಯಕರ್ತರಿಂದ ಅಮಿತ್ ಶಾ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಮೂರು ಕಿ.ಮೀ ದೂರ ನಡೆದ ರೋಡ್ ಶೋ ವೇಳೆಯಲ್ಲಿ ಸುತ್ತಮುತ್ತಲಿನ ಹಳ್ಳಿಗಳಿಂದ ಸಹಸ್ರಾರು ಜನರು ಆಗಮಿಸಿದ್ದರು. ಹಾಸನ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ,  ಬೇಲೂರು ಅಭ್ಯರ್ಥಿ ಹುಲ್ಲಹಳ್ಳಿ ಸುರೇಶ್ ಮತ್ತು ಸಕಲೇಶಪುರದ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಸೇರಿದಂತೆ ಪಕ್ಷದ  ಸಹಸ್ರಾರು ಕಾರ್ಯಕರ್ತರು ರೋಡ್ ಶೋ ನಲ್ಲಿ ಪಾಲ್ಗೊಂಡರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.