ಮೋದಿ, ಪ್ರಿಯಾಂಕಾ ಆಟ ರಾಜ್ಯದಲ್ಲಿ ನಡೆಯಲ್ಲ: ಎಚ್ ಡಿ ಕುಮಾರಸ್ವಾಮಿ
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್‌ನ ಪ್ರಿಯಾಂಕಗಾಂಧಿ, ರಾಹುಲ್‌ಗಾಂಧಿ ಯಾರೇ ರಾಜ್ಯಕ್ಕೆ ಬಂದರೂ ಅವರ ಆಟ ಇಲ್ಲಿ ನಡೆಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್‌ನ ಪ್ರಿಯಾಂಕಗಾಂಧಿ, ರಾಹುಲ್‌ಗಾಂಧಿ ಯಾರೇ ರಾಜ್ಯಕ್ಕೆ ಬಂದರೂ ಅವರ ಆಟ ಇಲ್ಲಿ ನಡೆಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇವರುಗಳ ಆಟ ರಾಜ್ಯದಲ್ಲಿ ನಡೆಯಲ್ಲ. ಕನ್ನಡ ನಾಡಿಗೆ ಇವರುಗಳ ಕೊಡುಗೆ ಏನೂ ಇಲ್ಲ ಎಂದರು. ಕೇಂದ್ರ ಗೃಹ ಸಚಿವ ಅಮಿತ್ ಶಾರವರ ರ್‍ಯಾಲಿಗೂ ಜನ ಬರುತ್ತಿಲ್ಲ, ಮುಖ್ಯಮಂತ್ರಿ ಬೊಮ್ಮಾಯಿರವರ ಸಮಾವೇಶಕ್ಕೂ ಜನ ಸೇರುತ್ತಿಲ್ಲ. ಬೊಮ್ಮಾಯಿ ಜನ ಬೆಂಬಲ ಕಳೆದುಕೊಂಡಿದ್ದಾರೆ ಎಂದರು.
ರಾಮನಗರಕ್ಕೆ ಪ್ರಧಾನಿ ನರೇಂದ್ರಮೋದಿ ಅವರ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೋದಿಯನ್ನಾದರೂ ಕರೆಸಲಿ, ಅಮೆರಿಕ ಅಧ್ಯಕ್ಷರನ್ನಾದರೂ ಕರೆಸಲಿ ನನಗೆ ಆತಂಕ ಇಲ್ಲ. ಒಂದು ದಿನ ಭಾಷಣ ಮಾಡಿ ಅವರು ಹೋಗಬಹುದು, ಬಿಜೆಪಿ ಜನರನ್ನು ಸೇರಿಸುತ್ತಾರೆ. ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂದು ಕಿಡಿಕಾರಿದರು.
ಇದಕ್ಕೂ ಮೊದಲು ಕುಮಾರಸ್ವಾಮಿ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


