ರಾಜಕೀಯ

ನಾಮಪತ್ರ ವಾಪಸ್ ಪಡೆಯುವಂತೆ ಜೆಡಿಎಸ್ ಅಭ್ಯರ್ಥಿಗೆ ವಿ ಸೋಮಣ್ಣ ಕರೆ: ಆಡಿಯೋ ವೈರಲ್, ಕಾಂಗ್ರೆಸ್ ಕಿಡಿ

ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ (ಆಲೂರು ಮಲ್ಲು) ನಾಮಪತ್ರ ವಾಪಸ್ ಪಡೆಯುವಂತೆ ಬಿಜೆಪಿ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಕರೆ ಮಾಡಿ ಹೇಳಿದ್ದಾರೆ ಎನ್ನಲಾದ ಆಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಾಮಪತ್ರ ವಾಪಸ್ ಪಡೆಯುವಂತೆ ಜೆಡಿಎಸ್ ಅಭ್ಯರ್ಥಿಗೆ ವಿ ಸೋಮಣ್ಣ ಕರೆ: ಆಡಿಯೋ ವೈರಲ್, ಕಾಂಗ್ರೆಸ್ ಕಿಡಿ
ಸೋಮಣ್ಣ
Published On :

ಬೆಂಗಳೂರು: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ (ಆಲೂರು ಮಲ್ಲು) ನಾಮಪತ್ರ ವಾಪಸ್ ಪಡೆಯುವಂತೆ ಬಿಜೆಪಿ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಕರೆ ಮಾಡಿ ಹೇಳಿದ್ದಾರೆ ಎನ್ನಲಾದ ಆಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಿನಗೆ ಗೂಟದ ಕಾರು ಕೋಡ್ತೀವಿ, ಮೊದಲು ನಾಮಪತ್ರ ವಾಪಸ್ ತಗೊ. ಆಮೇಲೆ ಎಲ್ಲ ಮಾತನಾಡೋಣ. ನಿನ್ನ ಬದುಕಿಗೆ ಏನು ಬೇಕೋ ಅದು ಮಾಡ್ತೇನೆ. ಹಿತ ಕಾಪಾಡ್ತೇನೆ ಎಂದು ಸೋಮಣ್ಣ ಹೇಳಿರುವುದು ಆಡಿಯೋದಲ್ಲಿದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಸೋಮವಾರ ಇದು ನಡೆದಿದೆ ಎನ್ನಲಾಗಿದೆ. 

Story image

ಈ ಆಡಿಯೋ ತುಣುಕನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿಯ ಹರಕೆಯ ಕುರಿಯಾಗಿರುವ ಸೋಮಣ್ಣ ಎರಡೂ ಕಡೆ ಬಲಿಯಾಗುವ ಭಯದಲ್ಲಿ ವಿಲವಿಲ ಒದ್ದಾಡುತ್ತಿದ್ದಾರೆ. ಜೆಡಿಎಸ್ ಅಭ್ಯರ್ಥಿಯಲ್ಲಿ ಕೈ ಮುಗಿಯುತ್ತೇನೆ ನಾಮಪತ್ರ ವಾಪಸ್ ತಗೊ. ಗೂಟದ ಕಾರು ಕೊಡಿಸುತ್ತೇನೆ ಎಂದು ಬೇಡುತ್ತಾ ಆಪರೇಷನ್ ಕಮಲಕ್ಕೆ ಮುಂದಾಗಿದ್ದಾರೆ.  ರಾಜ್ಯ ಬಿಜೆಪಿಗೆ ಅಡ್ಜೆಸ್ಟ್ಮೆಂಟ್ ರಾಜಕಾರಣವಿಲ್ಲದೆ ಗೆಲ್ಲುವ ಧೈರ್ಯ ಇಲ್ಲವೇಕೆ? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.