ರಾಜಕೀಯ

ಬೆಳಗಾವಿ: ಸಿಎಂ ಬೊಮ್ಮಾಯಿ ಅನುಪಸ್ಥಿತಿಯಲ್ಲಿ ಬಿಜೆಪಿ ರೋಡ್ ಶೋ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅನುಪಸ್ಥಿತಿಯಲ್ಲಿ ಬೆಳಗಾವಿ ನಗರದಲ್ಲಿ ಮಂಗಳವಾರ ತನ್ನ ಅಭ್ಯರ್ಥಿಗಳ ಪರ ಬಿಜೆಪಿ ರೋಡ್ ಶೋ ನಡೆಸಿತು.

ಬೆಳಗಾವಿ: ಸಿಎಂ ಬೊಮ್ಮಾಯಿ ಅನುಪಸ್ಥಿತಿಯಲ್ಲಿ ಬಿಜೆಪಿ ರೋಡ್ ಶೋ!
ಸಿಎಂ ಬೊಮ್ಮಾಯಿ
Published On :

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅನುಪಸ್ಥಿತಿಯಲ್ಲಿ ಬೆಳಗಾವಿ ನಗರದಲ್ಲಿ ಮಂಗಳವಾರ ತನ್ನ ಅಭ್ಯರ್ಥಿಗಳ ಪರ ಬಿಜೆಪಿ ರೋಡ್ ಶೋ ನಡೆಸಿತು.

ಬೆಳಗಾವಿ ಉತ್ತರ ಮತ್ತು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ರೋಡ್ ಶೋ ನಡೆಯಿತು.

ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ, ಸಂಸದೆ ಮಂಗಳಾ ಅಂಗಡಿ, ಶಾಸಕ ಅನಿಲ ಬೆನಕೆ, ಬಿಜೆಪಿ ರಾಜ್ಯ ಸಂಚಾಲಕ ಎಂ.ಬಿ.ಜಿರಲಿ, ಮುರುಗೇಂದ್ರಗೌಡ ಪಾಟೀಲ, ಸದಾನಂದ ಗುಂಟೆಪ್ಪನವರ್ ಹಾಗೂ ಪಕ್ಷದ ಕಾರ್ಯಕರ್ತರು ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಿಂದ ರೋಡ್ ಶೋ ನಡೆಸಿದರು.

ಈ ರೋಡ್ ಶೋ ಕಾಕತೀವ್ಸ್, ಗಣಪತ್ ಗಲ್ಲಿ, ಮಾರುತಿ ಗಲ್ಲಿ ಮೂಲಕ ಸಾಗಿ ಹುತಾತ್ಮ ವೃತ್ತದಲ್ಲಿ ಪೂರ್ಣಗೊಂಡಿತು.

ಅದೇ ರೀತಿ ಬೆಳಗಾವಿ ದಕ್ಷಿಣದ ಬಿಜೆಪಿ ಅಭ್ಯರ್ಥಿ, ಶಾಸಕ ಅಭಯ ಪಾಟೀಲ ಅವರು ಮಹಾರಾಷ್ಟ್ರ ಸಚಿವ ಗಿರೀಶ್ ಮಹಾಜನ್ ಮತ್ತು ಇತರ ಮುಖಂಡರೊಂದಿಗೆ ಕ್ಷೇತ್ರದ ವಿವಿಧ ರಸ್ತೆಗಳಲ್ಲಿ ರೋಡ್ ಶೋ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.