ಮಂಡ್ಯದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಪವರ್ ಶೋ: ಸಕ್ಕರೆ ನಾಡಿನಲ್ಲಿ ಕಮಲ ಅರಳಿಸಲು ತಂತ್ರ
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಬೆರಳೆಣಿಕೆಯಷ್ಟೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಪ್ರಚಾರ ಕಾರ್ಯ ರಂಗೇರುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ದೇಶ ಮಟ್ಟದ ಸ್ಟಾರ್ ಪ್ರಚಾರಕರ ಎಂಟ್ರಿಯಾಗುತ್ತಿದೆ.

ಮಂಡ್ಯ: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಬೆರಳೆಣಿಕೆಯಷ್ಟೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಪ್ರಚಾರ ಕಾರ್ಯ ರಂಗೇರುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ದೇಶ ಮಟ್ಟದ ಸ್ಟಾರ್ ಪ್ರಚಾರಕರ ಎಂಟ್ರಿಯಾಗುತ್ತಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಈ ಬಾರಿ ಚುನಾವಣೆಯಲ್ಲಿ ಕಮಲ ಅರಳಿಸಲು ಕೇಸರಿ ಪಡೆ ಹಲವು ಪ್ರಯತ್ನಗಳು, ತಂತ್ರಗಳನ್ನು ಮಾಡುತ್ತಿದೆ. ಈ ನಿಟ್ಟಿನಲ್ಲಿ ದೇಶ ಮಟ್ಟದಲ್ಲಿ ಬಿಜೆಪಿಯ ವರ್ಚಸ್ವಿ ನಾಯಕ ಬುಲ್ಡೋಜರ್ ಬಾಬಾ ಎಂದೇ ಕರೆಯಲ್ಪಡುವ ಯೋಗಿ ಆದಿತ್ಯನಾಥ್ ಅವರ ರೋಡ್ ಶೋ ಆರಂಭವಾಗಿದೆ.
ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ 500 ಮೀಟರ್ ರೋಡ್ ಶೋ ಸಂಜಯ್ ವೃತ್ತದಿಂದ ಮಹಾವೀರ ವೃತ್ತದವರೆಗೆ ಸಾಗುತ್ತಿದೆ.ಮಂಡ್ಯದಲ್ಲಿ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರೋಡ್ಶೋ ಆರಂಭಿಸಿದ್ದಾರೆ. ರೋಡ್ಶೋನಲ್ಲಿ ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಸೇರಿ ಹಲವರು ಭಾಗಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


