ಗೀತಾ ಶಿವರಾಜ್ಕುಮಾರ್ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ!
ನಟ ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು: ನಟ ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ.
ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ನಾಳೆ ಗೀತಾ ಅವರು ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ. ಮಾಜಿ ಸಿಎಂ ದಿವಂಗತ ಎಸ್. ಬಂಗಾರಪ್ಪನವರ ಪುತ್ರಿಯಾಗಿರುವ ಗೀತಾ ಅವರು, ಈ ಹಿಂದೆ ಜೆಡಿಎಸ್ನಿಂದ ಲೋಕಸಭಾ ಚುನಾವಣೆಗೆ ಬಿಎಸ್ ಯಡಿಯೂರಪ್ಪ ಎದುರಾಳಿಯಾಗಿ ಸ್ಪರ್ಧಿಸಿದ್ದರು. ಆದರೆ, ಯಡಿಯೂರಪ್ಪ ಅವರ ಎದುರು ಭಾರಿ ಮತಗಳ ಅಂತರದಿಂದ ಸೋತಿದ್ದರು.
ಬಂಗಾರಪ್ಪ ಅವರ ಐವರು ಮಕ್ಕಳಲ್ಲಿ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ ಮತ್ತು ಗೀತಾ ಶಿವರಾಜ್ಕುಮಾರ್ ಅವರು ರಾಜಕೀಯ ಜೀವನದಲ್ಲಿದ್ದಾರೆ. ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ಅವರು ಕ್ರಮವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿದ್ದು, ಈ ಬಾರಿ ಸೊರಬ ವಿಧಾನಸಭಾ ಚುನಾವಣೆಯಲ್ಲಿ ಸೆಣಸಲಿದ್ದಾರೆ.
2021ರ ಜುಲೈನಲ್ಲಿ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆಗಲೇ ಗೀತಾ ಶಿವರಾಜ್ಕುಮಾರ್ ಸಹ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಸುದ್ದಿಗಳು ಹಬ್ಬಿದ್ದವು.
ಈ ಹಿಂದೆಯೇ 'ಗೀತಾ ಶಿವರಾಜ್ಕುಮಾರ್ ಕಾಂಗ್ರೆಸ್ಗೆ ಬಂದಿದ್ದಾರೆ ಎಂದುಕೊಳ್ಳಿ' ಎಂದು ಹೇಳಿದ್ದ ಮಧು ಬಂಗಾರಪ್ಪ, ಗೀತಾ ಅವಕು ಪಕ್ಷ ಸೇರುವ ಕುರಿತು ಸುಳಿವು ನೀಡಿದ್ದರು. ಇದೀಗ ಅಧಿಕೃತವಾಗಿ ಅವರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


