ರಾಜಕೀಯ

ಧಾರವಾಡ: ಶೆಟ್ಟರ್ ಮತ್ತಿತರ ಕಾಂಗ್ರೆಸ್ ನಾಯಕರನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ!

ಧಾರವಾಡ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಬಿಜೆಪಿಯಿಂದ ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತಿತರ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು.

ಧಾರವಾಡ: ಶೆಟ್ಟರ್ ಮತ್ತಿತರ ಕಾಂಗ್ರೆಸ್ ನಾಯಕರನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ!
ಶೆಟ್ಟರ್, ಪ್ರಿಯಾಂಕಾ ಗಾಂಧಿ ಮತ್ತಿತರರು ಸಾಂದರ್ಭಿಕ ಚಿತ್ರ
Published On :

ಧಾರವಾಡ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ  ಶನಿವಾರ ಬಿಜೆಪಿಯಿಂದ ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್  ಮತ್ತಿತರ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು. ಹೋಟೆಲ್‌ವೊಂದರಲ್ಲಿ ನಡೆದ ಸಭೆಯಲ್ಲಿ ಲಿಂಗಾಯತ ಸಮುದಾಯದ ಪ್ರಮುಖರು ಪಾಲ್ಗೊಂಡರು.

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ- ಧಾರವಾಡ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಶೆಟ್ಟರ್ ಗೆಲುವಿಗೆ ಶ್ರಮಿಸುವಂತೆ ಪ್ರಿಯಾಂಕಾ ಕರೆ ನೀಡಿದರು. ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿಯ ಮಾಜಿ ಅಧ್ಯಕ್ಷ ಅಮಿತ್ ಶಾ ಇತ್ತೀಚೆಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ.

ತವರು ನೆಲದಲ್ಲಿ ಶೆಟ್ಟರ್ ಅವರನ್ನು ಸೋಲಿಸಲು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ನಿಯೋಜಿಸಿದೆ. ‘ಧಾರವಾಡ ಮತ್ತು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕರನ್ನು ತನ್ನ ತೆಕ್ಕೆಗೆ ಸೆಳೆಯಲು ಬಿಜೆಪಿ ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಭೆ ಆಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ನಂತರ ಕುಂದಗೋಳದಲ್ಲಿ ನಡೆದ ಪ್ರಿಯಾಂಕಾ ಗಾಂಧಿ ಅವರ ರೋಡ್ ಶೋನಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಜನರನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ, ಜನರಿಗೆ ಸಂಕಷ್ಟಗಳು ಉಲ್ಬಣಗೊಂಡವು"  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಜೀವನ ಸುಧಾರಿಸುತ್ತದೆ ಎಂದರು.

ಪ್ರಿಯಾಂಕಾ ಗಾಂಧಿ ಭಾನುವಾರ ಖಾನಾಪುರದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ಹಾಗೂ ಉತ್ತರ ಕರ್ನಾಟಕದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.