ರಾಜಕೀಯ

'ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ: ಮೋದಿ ಜೊತೆ ಓಟದ ಸ್ಪರ್ಧೆಗೆ ನಾನು ಸಿದ್ಧ'

ಪ್ರಧಾನಿ ನರೇಂದ್ರ ಮೋದಿಯವರು ಸಿದ್ಧರಿದ್ದರೆ ಅವರ ಜೊತೆಗಿನ ಓಟದ ಸ್ಪರ್ಧೆಗೆ ನಾನು ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

'ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ: ಮೋದಿ ಜೊತೆ ಓಟದ ಸ್ಪರ್ಧೆಗೆ ನಾನು ಸಿದ್ಧ'
ಸಿದ್ದರಾಮಯ್ಯ
Published On :

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸಿದ್ಧರಿದ್ದರೆ ಅವರ ಜೊತೆಗಿನ ಓಟದ ಸ್ಪರ್ಧೆಗೆ ನಾನು ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್  ಮಾಡಿರುವ ಸಿದ್ದರಾಮಯ್ಯ,  ಸಕ್ರಿಯ ರಾಜಕಾರಣದಿಂದ ನಾನು ದೂರ ಸರಿದಿಲ್ಲ ಎಂದಿರುವ ಅವರು ಮೋದಿಗೆ ಈ ಚಾಲೆಂಜ್ ಹಾಕಿದ್ದಾರೆ.

ಪ್ರಧಾನಿ ಅವರು ಏನನ್ನು ಹೇಳಲಿಕ್ಕೆ ಹೊರಟಿದ್ದಾರೆ? ಬಿ.ಎಸ್ ಯಡಿಯೂರಪ್ಪನವರನ್ನು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವಮಾನಕಾರಿಯಾಗಿ ಕಿತ್ತುಹಾಕಿದ ಬಿಜೆಪಿ, ಈಗ ಅವರನ್ನೇ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿರುವುದಕ್ಕೆ ಕಾರಣ ಅವರ ಮೇಲಿನ ಗೌರವವೇ? ಅಥವಾ ಅನುಕಂಪ ಗಳಿಕೆಯ ತಂತ್ರವೇ ಎಂದು ಪ್ರಶ್ನಿಸಿದ್ದಾರೆ.

ನಾನು ನಿವೃತ್ತಿಯಾಗುತ್ತೇನೆ ಎಂದು ಹೇಳುತ್ತಿರುವುದು ಚುನಾವಣಾ ರಾಜಕಾರಣದಿಂದಲೇ ಹೊರತು, ಸಕ್ರಿಯ ರಾಜಕಾರಣದಿಂದ ಅಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ. ನರೇಂದ್ರ ಮೋದಿಯವರು ಸಿದ್ಧ ಇದ್ದರೆ ಅವರ ಜೊತೆಯಲ್ಲಿ ಓಟದ ಸ್ಪರ್ಧೆಗೆ ನಾನು ಸಿದ್ಧ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.