SCSP, TSP ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ; ದಲಿತರಿಗೆ ಸರ್ಕಾರದಿಂದ ದೊಡ್ಡ ಅನ್ಯಾಯ: ಬಿಜೆಪಿ ಪ್ರತಿಭಟನೆಯಲ್ಲಿ ಬೊಮ್ಮಾಯಿ
ಎಸ್ ಸಿಪಿ/ಟಿಎಸ್‌ಪಿ ಯೋಜನೆಯ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ಬೆಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರು: ಎಸ್ ಸಿಪಿ/ಟಿಎಸ್‌ಪಿ ಯೋಜನೆಯ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ಬೆಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ ನಡೆಸುತ್ತಿದೆ.
ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಚಲವಾದಿ ನಾರಾಯಣಸ್ವಾಮಿ ಮತ್ತಿತರ ನಾಯಕರು ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಸುಮಾರು 11,000 ಕೋಟಿ ರೂ. ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿರುವುದು ದುರಂತವಾಗಿದೆ. ಇದು ಎಸ್‌ಸಿ/ಎಸ್‌ಟಿ ಯುವಕ-ಯುವತಿಯರು, ಮಹಿಳೆಯರಿಗೆ ಮಾಡಿರುವ ದೊಡ್ಡ ಅನ್ಯಾಯವಾಗಿದೆ ಎಂದರು.
ಈ ಹಣವನ್ನು ಪರಿಶಿಷ್ಟ ಜಾತಿಯವರ ಮನೆ ನಿರ್ಮಾಣ, ಶಿಕ್ಷಣಕ್ಕೆ ಬಳಸಿಕೊಳ್ಳಲಾಗುತಿತ್ತು. ಆದರೆ ಈಗ ಆ ಸಮುದಾಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರಾಕರಿಸಲಾಗಿದೆ. ಇದು ದಲಿತರ ಮೇಲೆ ಕಾಂಗ್ರೆಸ್ ಸರ್ಕಾರ ಮಾಡಿದ ಬಹುದೊಡ್ಡ ಅನ್ಯಾಯವಾಗಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಇಡೀ ಸಚಿವ ಸಂಪುಟ ದೆಹಲಿಗೆ: ಪ್ರಜಾಪ್ರಭುತ್ವ ವಿರೋಧಿ, ಜನತೆಗೆ ಮಾಡಿದ ಅವಮಾನ- ಸಿಎಂ ವಿರುದ್ಧ ಬಿಜೆಪಿ ಕಿಡಿ
ಎಸ್ಸಿಪಿ ಟಿಎಸ್ ಪಿ ಯೋಜನೆಗೆ ಮೀಸಲಿಟ್ಟ 34 ಸಾವಿರ ಕೋಟಿ ರೂ. ಅನುದಾನದಲ್ಲಿ ಸುಮಾರು 13 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ದಲಿತರ ಅಭಿವೃದ್ಧಿ ಹೊಡೆತ ಬೀಳಲಿದೆ. ಇದು ಕಾಂಗ್ರೆಸ್ ನ ದಲಿತ ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದರು.
ಸಿದ್ದರಾಮಯ್ಯ ಕನ್ನಡದ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದರು. ಈಗ ಇಡೀ ಸಂಪುಟವನ್ನೇ ದೆಹಲಿಗೆ ಕರೆದುಕೊಂಡು ಹೊಗಿ ಕನ್ನಡದ ಅಸ್ಮಿತೆಗೆ ಧಕ್ಕೆ ತಂದಿದ್ದಾರೆ. ರಾಜ್ಯ ಸರ್ಕಾರದ ಆಡಳಿತವನ್ನು ಕಾಂಗ್ರೆಸ್ ಹೈ ಕಮಾಂಡ್ ನಿಯಂತ್ರಣ ಮಾಡುತ್ತಿದೆ. ಕರ್ನಾಟಕದ ಜನತೆಗೆ ಇವರು ಅವಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಎಸ್ಸಿಎಸ್ಪಿ-ಟಿಎಸ್‌ಪಿ ಅನುದಾನ ಖಾತರಿ ಯೋಜನೆಗಳಿಗೆ ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಎಎಪಿ ಬೃಹತ್ ಪ್ರತಿಭಟನೆ
ಮೊದಲನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಎರಡನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಸಾಕಷ್ಟು ವ್ಯತ್ಯಾಸ ಇದೆ. ಈಗಿನ ಸಿಎಂ ಸಿದ್ದರಾಮಯ್ಯ ಗೆ ಆಡಳಿತದ ಮೇಲಿನ ಹಿಡಿತ ತಪ್ಪಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸರ್ಕಾರದ ಆರಂಭದಲ್ಲಿಯೇ ಇಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಶಾಸಕಾಂಗ ಸಭೆಯಲ್ಲಿಯೂ ಶಾಸಕರು ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಟ್ಟಿಲ್ಲ. ಟಾನ್ಸಫರ್ ಮಾಡುವ ದಂಧೆ, ಸ್ವಜನ ಪಕ್ಷಪಾತ. ಅವ್ಯಾಹತವಾಗಿ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲದ ಸಂದರ್ಭದಲ್ಲಿ ಪ್ರವಾಹ, ಬರ ಇರುವ ಸಂದರ್ಭದಲ್ಲಿ ರಾಜ್ಯದಲ್ಲಿ ಆಡಳಿತ ವೈಫಲ್ಯತೆ ಕಾಣಿಸುತ್ತಿದೆ. ಎರಡೇ ತಿಂಗಳಲ್ಲಿ ಮುಖ್ಯಮಂತ್ರಿ ಗಳು ಸಂಪುಟದ ಸಚಿವರನ್ನು ಕರೆದುಕೊಂಡು ದೆಹಲಿಗೆ ಹೋಗಿ ಸಭೆ ನಡೆಸಿರುವುದು ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಅಂತ ಗೊತ್ತಾಗಿದೆ ಎಂದರು.
ಬಿಜೆಪಿ ಅವಧಿಯ ಅಕ್ರಮಗಳ ಬಗ್ಗೆ ಮಾತನಾಡುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗುರುವ ಅವ್ಯವಹಾಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ ಈ ಬಗ್ಗೆ ಉತ್ತರ ನೀಡಲಿ. ನಮ್ಮ ಅವಧಿಯಲ್ಲಿ ಅಭಿವೃದ್ಧಿಗೆ ಬಿಡುಗಡೆಯಾದ ಹಣ ತಡೆ ಹಿಡಿದಿದ್ದಾರೆ. ಇದರಿಂದ ಯಾವುದೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


