ಮನಸಲ್ಲಿದ್ದಿದ್ದು ಖಂಡ್ರೆ, ಬಾಯಿಗೆ ಬಂದಿದ್ದು ಖರ್ಗೆ ಹೆಸರು: ಆರಗ ಜ್ಞಾನೇಂದ್ರ ಸ್ಪಷ್ಟನೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನಾನು ಎಂದಿಗೂ ಅಗೌರವ ತರುವ ಹೇಳಿಕೆ ನೀಡಿಲ್ಲ ಎಂದು ಮಾಜಿ ಗೃಹ ಸಚಿವ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ

ತೀರ್ಥಹಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನಾನು ಎಂದಿಗೂ ಅಗೌರವ ತರುವ ಹೇಳಿಕೆ ನೀಡಿಲ್ಲ ಎಂದು ಮಾಜಿ ಗೃಹ ಸಚಿವ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಆಡಿದ ಮಾತು ಮತ್ತು ಆಡದ ಮಾತನ್ನು ಸೇರಿಸಿ ಕಾಂಗ್ರೆಸ್ ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಐದು ಬಾರಿ ಶಾಸಕನಾದವನು ನಾನು. ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಅಪಾರವಾದ ಗೌರವ ನನಗಿದೆ. ಅವರ ಬಗ್ಗೆ ಕೀಳಾಗಿ ಟೀಕೆ ಮಾಡಿಲ್ಲ, ಖಂಡ್ರೆ ಎನ್ನುವ ಬದಲು ಬಾಯಿ ತಪ್ಪಿ ಖರ್ಗೆ ಹೆಸರು ಹೇಳಿದೆ. ನಂತರ ಕ್ಷಮೆಯಾಚಿಸಿದ್ದೇನೆ ಎಂದರು.
ಕಾಂಗ್ರೆಸ್ ನವರು ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಎಳೆತಂದು ಖರ್ಗೆಯವರನ್ನು ಸಣ್ಣವರನ್ನಾಗಿ ಮಾಡಿದ್ದಾರೆʼ ಎಂದು ಹೇಳಿದರು. ನಾನು ಈಗಾಗಲೇ ವಿಷಯವನ್ನು ಸ್ಪಷ್ಟಪಡಿಸಿದ್ದೇನೆ. ವಿಶೇಷವಾಗಿ ಖರ್ಗೆ ಬಗ್ಗೆ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ.
ಕಾಂಗ್ರೆಸ್ ನ ಕೆಲವು ಸ್ನೇಹಿತರು ನನ್ನ ವಿರುದ್ಧ ಆಗಸ್ಟ್ 1ರಂದು ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆ ವೇಳೆ ನಾನು ಖರ್ಗೆ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ನನ್ನ ಹೇಳಿಕೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗಿದೆ. ಕಾಂಗ್ರೆಸ್ ನಾಯಕರು ನನ್ನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ದಾಖಲಿಸಿದ್ದಾರೆ. ನಾನು ಅದನ್ನು ಎದುರಿಸುತ್ತೇನೆ ಎಂದರು.
ನಾನು ಅರಣ್ಯ ಇಲಾಖೆಯ ಬಗ್ಗೆ ಹೇಳುತ್ತಿದ್ದೆ. ನಾನು ಮಲ್ಲಿಕಾರ್ಜುನ ಖರ್ಗೆಯವರನ್ನು ನನ್ನಏಕೆ ಎಳೆದುಕೊಳ್ಳುತ್ತೇನೆ? ಜ್ಞಾನೇಂದ್ರ ಪ್ರಶ್ನಿಸಿದರು. ಖರ್ಗೆಯವರ ಹಿರಿತನ, ರಾಜನೀತಿ ಮತ್ತು ನಡವಳಿಕೆಯಿಂದಾಗಿ ಅವರನ್ನು ಗೌರವಿಸುತ್ತೇನೆ. "ನಾನು ಅಂತಹ ಮಟ್ಟಕ್ಕೆ ಇಳಿಯುವುದಿಲ್ಲ. ನಾನು ಅವರನ್ನು ರಾಜಕೀಯವಾಗಿ ಟೀಕಿಸಿರಬಹುದು ಆದರೆ ವೈಯಕ್ತಿಕವಾಗಿ ಅಲ್ಲ.
ಪ್ರತಿಭಟನೆಯ ಸಂದರ್ಭದಲ್ಲಿ ನಾನು ಅವರನ್ನು ಅವಹೇಳನ ಮಾಡಿಲ್ಲ. ನಾನು ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಹೇಳಿದ್ದರೆ, ನಾನು ಯಾವುದೇ ಶಿಕ್ಷೆ ಅನುಭವಿಸಲು ಸಿದ್ದ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


