ಕುಮಾರಸ್ವಾಮಿ ಪ್ರಧಾನಮಂತ್ರಿವರೆಗೆ ಹೋಗಿದ್ದಾರೆ, ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
"ಕುಮಾರಸ್ವಾಮಿ ಅವರ ಇತ್ತೀಚಿನ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಅವರು ಪ್ರಧಾನಮಂತ್ರಿವರೆಗೂ ಹೋಗಿದ್ದು ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ- ಡಿಕೆ ಶಿವಕುಮಾರ್

ಬೆಂಗಳೂರು: "ಕುಮಾರಸ್ವಾಮಿ ಅವರ ಇತ್ತೀಚಿನ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಅವರು ಪ್ರಧಾನಮಂತ್ರಿವರೆಗೂ ಹೋಗಿದ್ದು ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸುತ್ತಾ ಈ ವಿಚಾರ ಪ್ರಸ್ತಾಪಿಸಿದರು.
"ನಾಳೆಯಿಂದ ನಾನು ಹಾಗೂ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾ ನಾಯಕರುಗಳ ಜೊತೆ ಸಭೆ ಮಾಡುತ್ತಿದ್ದು, ಕೆಲವು ಸಮುದಾಯಗಳ ಮುಖಂಡರ ಜೊತೆ ಚರ್ಚೆ ಮಾಡಬೇಕಿದೆ. ಅದರ ಭಾಗವಾಗಿ ಇಂದು ಪಕ್ಷದ ಅಲ್ಪಸಂಖ್ಯಾತ ನಾಯಕರ ಜೊತೆ ಸಭೆ ಮಾಡುತ್ತಿದ್ದೇನೆ" ಎಂದು ತಿಳಿಸಿದರು.
ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸ್ (ನೈಸ್) ಯೋಜನೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಿಸುವುದಾಗಿ ಹೆಚ್ ಡಿ ಕುಮಾರಸ್ವಾಮಿ ನೆನ್ನೆ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


