'ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ನವರೇ ಕೂಡಲೇ ಕೃಷಿ ಸಚಿವರ ರಾಜಿನಾಮೆ ಪಡೆಯಿರಿ'
ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ಅವರೇ ನಿಮ್ಮದೇ ಸಂಪುಟದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು: ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ಅವರೇ ನಿಮ್ಮದೇ ಸಂಪುಟದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ. ನೀವು ಈ ಕೂಡಲೇ ಭ್ರಷ್ಟ ಸಚಿವರ ರಾಜೀನಾಮೆ ಪಡೆದುಕೊಳ್ಳಬೇಕು ಅಥವಾ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಈ ಹಿಂದೆ ಶಾಸಕರ ಪತ್ರ ನಕಲು ಎಂದಿದ್ದ ನೀವು, ಈಗ ನಿಮ್ಮ ಸಚಿವರ ಕರ್ಮಕಾಂಡ ಬಯಲು ಮಾಡುವ ಪತ್ರವೂ ನಕಲು ಎನ್ನುತ್ತಿರೋ ಹೇಗೆ..? ಎಂದು ಬಿಜೆಪಿ ಪ್ರಶ್ನಿಸಿದೆ.
ಕಪೋಲಕಲ್ಪಿತ ಸುಳ್ಳು ಆರೋಪಗಳ ಪುಂಗಿ ಊದಿ ಅಧಿಕಾರಕ್ಕೆ ಬಂದ ಕರ್ನಾಟಕ ಕಾಂಗ್ರೆಸ್ ಪಕ್ಷ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನಾಂದಿ ಹಾಡಿದೆ. ಸಚಿವರಾದ ಮೊದಲ ದಿನದಿಂದಲೇ ವಸೂಲಿ, ವರ್ಗಾವಣೆ, ದ್ವೇಷದ ರಾಜಕಾರಣಕ್ಕೆ ಮುನ್ನುಡಿ ಬರೆದ ಚೆಲುವರಾಯಸ್ವಾಮಿ, 6 ರಿಂದ 8 ಲಕ್ಷ ರೂಪಾಯಿ ಕಮಿಷನ್ಗಾಗಿ ತನ್ನ ಇಲಾಖೆಯ ಮೇಲಾಧಿಕಾರಿಗಳನ್ನು ಕಲೆಕ್ಷನ್ ಏಜೆಂಟ್ಗಳನ್ನಾಗಿ ಮಾಡಿಕೊಂಡಿದ್ದಾರಂತೆ ನೋಡಿ ಎಂದು ಬಿಜೆಪಿ ಕಾಲೆಳೆದಿದೆ. ಕಾಂಗ್ರೆಸ್ನಲ್ಲಿ ಭ್ರಷ್ಟಾಚಾರ ಒಂದೇ ಗ್ಯಾರಂಟಿ. ಮಾನ್ಯ ಸಿದ್ದರಾಮಯ್ಯನವರೇ, ಇದರಲ್ಲಿ ಯಾರ್ಯಾರ ಪಾಲೆಷ್ಟು..? ಎಂದು ಪ್ರಶ್ನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


