ರಾಜಕೀಯ

ಆಗಸ್ಟ್ 15ರ ಬಳಿಕ ವಿಪಕ್ಷ ನಾಯಕ ಆಯ್ಕೆ: ಮಾಜಿ ಸಿಎಂ ಬೊಮ್ಮಾಯಿ

ಆಗಸ್ಟ್ 15ರ ಬಳಿಕ ವಿಪಕ್ಷ ನಾಯಕನ ಆಯ್ಕೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

ಆಗಸ್ಟ್ 15ರ ಬಳಿಕ ವಿಪಕ್ಷ ನಾಯಕ ಆಯ್ಕೆ: ಮಾಜಿ ಸಿಎಂ ಬೊಮ್ಮಾಯಿ
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಜೊತೆ ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಆಗಸ್ಟ್ 15ರ ಬಳಿಕ ವಿಪಕ್ಷ ನಾಯಕನ ಆಯ್ಕೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನಗಳ ಆಯ್ಕೆ ಕುರಿತು ಇದೇ 15ರ ನಂತರ ನಿರ್ಧಾರ ಕೈಗೊಳ್ಳುವುದಾಗಿ ಪಕ್ಷದ ವರಿಷ್ಠರು ತಿಳಿಸಿದ್ದಾರೆ ಎಂದು ಹೇಳಿದರು.

‘ಸಂಸತ್‌ ಅಧಿವೇಶನದ ವೇಳೆ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಆಗ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ್ದೇನೆ. ಆಗ ವರಿಷ್ಠರಿಂದ ಶೀಘ್ರ ಆಯ್ಕೆಯ ಭರವಸೆ ದೊರೆತಿದೆ.

ಲೋಕಸಭೆ ಚುನಾವಣೆಯ ಸಿದ್ದತೆ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ಸರ್ಕಾರದ ಬಗ್ಗೆ ಜನರ ಅಭಿಪ್ರಾಯ, ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸುವ ಕುರಿತು ಚರ್ಚೆ ಮಾಡಿದ್ದೇವೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ಆರಂಭಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.