'ಪೇಸಿಎಂ' ಪೋಸ್ಟರ್ ಅಭಿಯಾನ ಬಳಿಕ ಪೊಲೀಸರಿಂದ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ: ರವಿಕುಮಾರ್
ಪೇಸಿಎಂ ಪೋಸ್ಟರ್ ಅಭಿಯಾನ ಬಳಿಕ ಪೊಲೀಸರು ನಮ್ಮ ಪಕ್ಷದ ಕಾರ್ಯಕರ್ತರಿಗೆ ಬೆದರಿಸಿ, ಕಿರುಕುಳ ನೀಡುತ್ತಿದ್ದಾರೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

ಬೆಂಗಳೂರು: ಪೇಸಿಎಂ ಪೋಸ್ಟರ್ ಅಭಿಯಾನ ಬಳಿಕ ಪೊಲೀಸರು ನಮ್ಮ ಪಕ್ಷದ ಕಾರ್ಯಕರ್ತರಿಗೆ ಬೆದರಿಸಿ, ಕಿರುಕುಳ ನೀಡುತ್ತಿದ್ದಾರೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಶುಕ್ರವಾರ ಆರೋಪಿಸಿದ್ದಾರೆ.
ಈ ಸಂಬಂಧ ಶುಕ್ರವಾರ ಅವರು ಉನ್ನತ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯಕರ್ತರನ್ನು ಹೆದರಿಸುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.
ಪೊಲೀಸರು ನಮ್ಮ ಕಾರ್ಯಕರ್ತರಿಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ. ನಮ್ಮ ಐಟಿ ಸೆಲ್ ಸರ್ಕಾರದ ಪ್ರತಿಯೊಂದು ಹಂತದಲ್ಲೂ ಹೆಚ್ಚುತ್ತಿರುವ ಭ್ರಷ್ಟಾಚಾರದ ಬಗ್ಗೆ ಆಡಳಿತ ಪಕ್ಷವನ್ನು ಪ್ರಶ್ನಿಸುತ್ತಿದೆ. ಇದು ಯಾವುದೇ ರಾಜಕೀಯ ಪಕ್ಷದ ಹಕ್ಕು, ತಮ್ಮ ತಪ್ಪುಗಳನ್ನು ಸರಿಪಡಿಸುವ ಬದಲು, ಅವರು ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


