ರಾಜಕೀಯ

'ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಬಿಜೆಪಿಯ ಎಲ್ಲಾ ಪ್ರಯತ್ನಗಳು ವಿಫಲವಾಗುತ್ತವೆ': ದಿಗ್ವಿಜಯ್ ಸಿಂಗ್

ಜನರು ಕಾಂಗ್ರೆಸ್‌ಗೆ ಭಾರಿ ಜನಾದೇಶ ನೀಡಿರುವುದರಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಕೈಗೊಳ್ಳುವ ಬಿಜೆಪಿಯ ಯಾವುದೇ ಪ್ರಯತ್ನಗಳು ಫಲ ನೀಡುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮಂಗಳವಾರ ಹೇಳಿದ್ದಾರೆ.

'ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಬಿಜೆಪಿಯ ಎಲ್ಲಾ ಪ್ರಯತ್ನಗಳು ವಿಫಲವಾಗುತ್ತವೆ': ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್
Published On :

ಹುಬ್ಬಳ್ಳಿ: ಜನರು ಕಾಂಗ್ರೆಸ್‌ಗೆ ಭಾರಿ ಜನಾದೇಶ ನೀಡಿರುವುದರಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಕೈಗೊಳ್ಳುವ ಬಿಜೆಪಿಯ ಯಾವುದೇ ಪ್ರಯತ್ನಗಳು ಫಲ ನೀಡುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮಂಗಳವಾರ ಹೇಳಿದ್ದಾರೆ. 
ಪಕ್ಷದ ಜಿಲ್ಲಾ ಘಟಕದ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ಸಿಂಗ್

ಸುದ್ದಿಗಾರರೊಂದಿಗೆ ಮಾತನಾಡಿ, ‘ಶೇ 40 ಕಮಿಷನ್ ಹಣ ಬಳಸಿ ಬಿಜೆಪಿಯು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಪ್ರಯತ್ನ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಜನರು ಪಕ್ಷಕ್ಕೆ ಸಾಕಷ್ಟು ಸ್ಥಾನಗಳನ್ನು ನೀಡಿ ಆಶೀರ್ವದಿಸಿರುವುದರಿಂದ ಬಿಜೆಪಿಯ ಪ್ರತಿಯೊಂದು ಪ್ರಯತ್ನವೂ ವಿಫಲವಾಗುವುದು ಖಚಿತ ಎಂದರು.

ಕೇಸರಿ ಪಕ್ಷವನ್ನು ಲೇವಡಿ ಮಾಡಿದ ಅವರು, ಜನರಿಂದ ತಿರಸ್ಕೃತವಾಗಿದ್ದರೂ, ಬಿಜೆಪಿ ನಾಯಕರು ಇನ್ನೂ ಪಾಠ ಕಲಿತಿಲ್ಲ. ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಸಹ ‘ಶೇ 50 ರಷ್ಟು ಕಮಿಷನ್’ ಆರೋಪದೊಂದಿಗೆ ದೊಡ್ಡ ಪ್ರಮಾಣದ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ದೂರಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ನೀಡಿರುವ ಜನಾದೇಶವು ರಾಷ್ಟ್ರರಾಜಕಾರಣಕ್ಕೆ ಹೊಸ ದಿಕ್ಕನ್ನು ನೀಡಿದೆ. ಕಾಂಗ್ರೆಸ್‌ಗೆ ಏಕತೆಯಲ್ಲಿ ನಂಬಿಕೆಯಿದೆ. ಆದರೆ, ಬಿಜೆಪಿಯು ಧರ್ಮದ ಆಧಾರದ ಮೇಲೆ ಜನರ ಮನಸ್ಸಿಗೆ ವಿಷವನ್ನು ತುಂಬುತ್ತಿದೆ ಎಂದರು. 

ಮಣಿಪುರ ಹಿಂಸಾಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಈಶಾನ್ಯ ರಾಜ್ಯದಲ್ಲಿನ ಅಸ್ಥಿರ ಪರಿಸ್ಥಿತಿಗೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಹೊಣೆಗಾರರಾಗಿದ್ದಾರೆ. ರಾಜ್ಯದಲ್ಲಿನ ಗಲಭೆಗಳು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಜನರ ನಡುವೆ ಒಡಕು ಮೂಡಿಸುವ ಬಿಜೆಪಿಯ ರಾಜಕೀಯದ ಪರಿಣಾಮವಾಗಿದೆ. ರಾಜ್ಯದ ಅಮಾಯಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.