ಲೋಕಸಭಾ ಚುನಾವಣೆ: ಅನ್ಯ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಒಲವು- ಡಿಸಿಎಂ ಡಿಕೆ ಶಿವಕುಮಾರ್
2024ರ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆಯೇ, ಅನ್ಯ ಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರಲು ಒಲವು ತೋರಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆಯೇ, ಅನ್ಯ ಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರಲು ಒಲವು ತೋರಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುರ್ಬಲವಾಗಿರುವ ಕಡೆ ಪಕ್ಷವನ್ನು ಬಲಪಡಿಸಬೇಕು, ಲೋಕಸಭೆ ಚುನಾವಣೆಗೆ ಆದ್ಯತೆ ನೀಡಲಾಗಿದ್ದು, ಸ್ಥಳೀಯರ ಅಗತ್ಯಕ್ಕೆ ಅನುಗುಣವಾಗಿ ಯಾರನ್ನೂ ಸೇರಿಸಿಕೊಳ್ಳಬೇಕು ಎನ್ನುವುದನ್ನು ಸ್ಥಳೀಯ ಮುಖಂಡರಿಗೆ ಬಿಟ್ಟಿದ್ದು, ಪಕ್ಷದ ಮತದಾರರ ಪ್ರಮಾಣ ಹೆಚ್ಚಿಸಲು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸ್ಥಳೀಯ ಮುಖಂಡರಿಗೆ ಸೂಚಿಸಲಾಗಿದೆ ಎಂದರು.
ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೊಂದಿದ್ದು, ಈಗಾಗಲೇ ತಯಾರಿ ಆರಂಭಿಸಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ನಗರದ ಎಲ್ಲಾ ಮೂರು ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆದ್ದಿರುವುದರಿಂದ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಕಾಂಗ್ರೆಸ್ ತಂತ್ರದ ಪ್ರಮುಖ ಭಾಗವಾಗಿದೆ.
ಪಕ್ಷ ಬಿಟ್ಟು ಹೋಗಿರುವವರು ಮರಳಿ ಬಂದಿರುವ ಉದಾಹರಣೆ ಸಾಕಷ್ಟಿದೆ. ಹೀಗಾಗಿ ತಪ್ಪು ಮಾಡಿರುವುದನ್ನು ಸರಿ ಮಾಡಿಕೊಳ್ಳುವುದಾದರೆ ಪಕ್ಷಕ್ಕೆ ಮತ್ತೆ ಬರಬಹುದು. ಆದರೆ, ಅವರಿಗೆ ಮೊದಲ ಸಿಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ಇದನ್ನೂ ಓದಿ: ರಾಜಕೀಯ ನಿವೃತ್ತಿ ಪಡೆಯುತ್ತೇನೆ ಹೊರತು, ಕಾಂಗ್ರೆಸ್ಗೆ ಹೋಗಲ್ಲ- ಮುನಿರತ್ನ: ಯಾರೇ ಬಂದರೂ ಪಕ್ಷಕ್ಕೆ ಸ್ವಾಗತ- ಡಿಕೆ ಸುರೇಶ್
ಬಿಜೆಪಿಯಲ್ಲಿ ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂಬ ಕಾರಣಕ್ಕೆ ಆ ಪಕ್ಷದ ಕೆಲವು ಶಾಸಕರು ಕಾಂಗ್ರೆಸ್ ಗೆ ಬರಬಹುದು, ಬಿಜೆಪಿಯಿಂದ ಬರುವ ಶಾಸಕರನ್ನು ಸೇರಿಸಿಕೊಳ್ಳುತ್ತೇವೆ. ಪರಿಶೀಲನೆ ಮಾಡಿ ಪಕ್ಷಕ್ಕೆ ಸೇರಿಸಿಕೊಳ್ಳುತೇವೆಂದು ಅಧ್ಯಕ್ಷ ರು ಕೂಡಾ ಈಗಾಗಲೇ ಹೇಳಿದ್ದಾರೆ. ಕಾಂಗ್ರೆಸ್ ಸಿದ್ಧಾಂತ, ನಾಯಕತ್ವದ ಮೇಲೆ ನಂಬಿಕೆ ಇಟ್ಟು ಪಕ್ಷಕ್ಕೆ ಬರುವುದಾದರೆ ಬರಬಹುದು ಎಂದರು.
ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಯಾರೇ ಪಕ್ಷಕ್ಕೆ ಸೇರ್ಪಡೆಗೊಂಡರೂ ಸ್ವಾಗತಿಸುತ್ತೇನೆ, ಆದರೆ ಲೋಕಸಭೆಯ ಕಲಾಪ ಮತ್ತು ತಮ್ಮ ಲೋಕಸಭಾ ಕ್ಷೇತ್ರದ ಕೆಲಸಗಳಲ್ಲಿ ನಿರತರಾಗಿದ್ದರಿಂದ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಬೇರೆ ಪಕ್ಷಗಳ ನಾಯಕರನ್ನು ಪಕ್ಷಕ್ಕೆ ಸೇರಿಸುವ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ನಿಂದ ಎಸ್‌ಟಿ ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ ಮತ್ತು ಜನತಾ ದಳ (ಜಾತ್ಯತೀತ) ಕೆ ಗೋಪಾಲಯ್ಯ ಸೇರಿದಂತೆ 17 ಶಾಸಕರು 2019ರಲ್ಲಿ ಬಿಜೆಪಿ ಸೇರಿ ರಾಜ್ಯದಲ್ಲಿ ಸರ್ಕಾರ ರಚಿಸಲು ಸಹಾಯ ಮಾಡಿದ್ದರು. ಆ ವರ್ಷ ನಡೆದ ಉಪಚುನಾವಣೆಯಲ್ಲಿ ಅವರನ್ನು ಬಿಜೆಪಿ ಟಿಕೆಟ್‌ನಲ್ಲಿ ಮರು ಆಯ್ಕೆ ಮಾಡಲಾಗಿತ್ತು ಮತ್ತು ಅವರಲ್ಲಿ ಅನೇಕರನ್ನು ಬಿಜೆಪಿ ಸರ್ಕಾರದಲ್ಲಿ ಮಂತ್ರಿ ಮಾಡಲಾಗಿತ್ತು. ಈ ಮಧ್ಯೆ ಬೇಕಾದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ, ಆದರೆ ಕಾಂಗ್ರೆಸ್ ಸೇರುವುದಿಲ್ಲ ಎಂದು ಮಾಜಿ ಸಚಿವ ಮುನಿರತ್ನ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


