ಎಸ್.ಟಿ. ಸೋಮಶೇಖರ್ ಅಸಮಾಧಾನ ತಣಿಸಲು ಬಿಜೆಪಿಯಿಂದ ಇಬ್ಬರು ಮುಖಂಡರ ಉಚ್ಛಾಟನೆ!
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿಬಂದಿತ್ತು. ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದರೂ ನನ್ನನ್ನು ಸೋಲಿಸಲು ಪಕ್ಷದ ಒಳಗಿನವರೇ ಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ ಎಂದು ಎಸ್. ಟಿ. ಸೋಮಶೇಖರ್ ಆರೋಪಿಸಿದ್ದರು.

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿಬಂದಿತ್ತು. ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದರೂ ನನ್ನನ್ನು ಸೋಲಿಸಲು ಪಕ್ಷದ ಒಳಗಿನವರೇ ಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ ಎಂದು ಎಸ್. ಟಿ. ಸೋಮಶೇಖರ್ ಆರೋಪಿಸಿದ್ದರು.
ಅಲ್ಲದೇ ಈ ಸಂಬಂಧ ಪಕ್ಷದ ರಾಜ್ಯದ ಘಟಕಕ್ಕೂ ದೂರು ನೀಡಿದ್ದರು. ಆದರೆ, ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗುತಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಆಲರ್ಟ್ ಆದ ರಾಜ್ಯ ಬಿಜೆಪಿ ನಾಯಕರು ಸೋಮಶೇಖರ್ ಅವರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಯಶವಂತಪುರ ಬಿಜೆಪಿ ಮಂಡಳ ಮಾಜಿ ಅಧ್ಯಕ್ಷ ಮಾರೇಗೌಡ ಹಾಗೂ ಉಪಾಧ್ಯಕ್ಷ ಧನಂಜಯ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅವರಿಬ್ಬರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಬಿ. ನಾರಾಯಣ ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ಮಾರೇಗೌಡ ಎಸ್.ಟಿ. ಸೋಮಶೇಖರ್ ಅವರ ಭಾವಚಿತ್ರವಿರುವ ಪಕ್ಷದ ಬ್ಯಾನರ್ ಹಾಕಿಕೊಂಡು ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. ಇದಕ್ಕೆ ಎಸ್. ಟಿ. ಸೋಮಶೇಖರ್ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ, ಅವರ ವಿರುದ್ಧ ಕ್ರಮ ಕೈಗೊಳ್ಳದ ಬಿಜೆಪಿ ನಾಯಕರ ವಿರುದ್ಧವೂ ಕಿಡಿಕಾರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


