ರಾಜಕೀಯ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಿ: ಸರ್ಕಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನದಿ ನೀರನ್ನು ಕೂಡಲೇ ನಿಲ್ಲಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಆಗ್ರಹಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಿ: ಸರ್ಕಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ
ಮಾಜಿ ಸಿಎಂ ಬೊಮ್ಮಾಯಿ
Published On :

ಬೆಂಗಳೂರು: ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನದಿ ನೀರನ್ನು ಕೂಡಲೇ ನಿಲ್ಲಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್ ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ ಆದರೂ ಅದರ ವಿರುದ್ದ ಯಾವುದೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗ ಸಿಡಬ್ಲುಎಂಎ ಸೂಚನೆ ಮೇರೆಗೆ 5000 ಕ್ಯುಸೆಕ್ಸ್  ನೀರು ಬಿಡಲು ಪ್ರಾರಂಭ ಮಾಡಿದ ಮೇಲೆ ಡಿಸಿಎಂ ಅವರು ಕಾನೂನು ತಜ್ಞರ ಜೊತೆ ಚರ್ಚೆ ಮಾಡುವುದರಲ್ಲಿ ಯಾವ ಅರ್ಥ ಇದೆ. ಹಿಂದಿನ ಆದೇಶದ ವಿರುದ್ದ ಈಗಾಗಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕಾಗಿತ್ತು, ಅದು ಕೂಡ ಮಾಡಿಲ್ಲ.

ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಅರ್ಥವಿಲ್ಲ. ಕೂಡಲೇ ನೀರು ನಿಲ್ಲಿಸಿ‌ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಆಗ್ರಹ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.