ರಾಜಕೀಯ

ಗೂಳಿಹಟ್ಟಿ ಶೇಖರ್ ಗೆ ಆದ ಅನುಭವ ನನಗೂ ಆಗಿದೆ, ನಾನೂ ಬಿಜೆಪಿಯಲ್ಲಿದ್ದವನು: ಮುಖ್ಯಮಂತ್ರಿ ಚಂದ್ರು

ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಆದ ಅನುಭವ ನನಗೂ ಆಗಿದೆ. ನಾನೂ ಬಿಜೆಪಿಯಲ್ಲಿ ಇದ್ದು ಬಂದವನು ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಗುರುವಾರ ಹೇಳಿದ್ದಾರೆ.

ಗೂಳಿಹಟ್ಟಿ ಶೇಖರ್ ಗೆ ಆದ ಅನುಭವ ನನಗೂ ಆಗಿದೆ, ನಾನೂ ಬಿಜೆಪಿಯಲ್ಲಿದ್ದವನು: ಮುಖ್ಯಮಂತ್ರಿ ಚಂದ್ರು
ಮುಖ್ಯಮಂತ್ರಿ ಚಂದ್ರು
Published On :

ಹುಬ್ಬಳ್ಳಿ: ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಆದ ಅನುಭವ ನನಗೂ ಆಗಿದೆ. ನಾನೂ ಬಿಜೆಪಿಯಲ್ಲಿ ಇದ್ದು ಬಂದವನು ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಗುರುವಾರ ಹೇಳಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಜಾತಿ ಕಾರಣಕ್ಕೆ ನಾಗ್ಪುರದ ಆರ್ ಎಸ್ಎಸ್ ಕಚೇರಿಯಲ್ಲಿರುವ ಹೆಡಗೇವಾರ್ ಸ್ಮಾರಕದೊಳಗೆ ಬಿಡಲಿಲ್ಲ ಎಂದು ಗೂಳಿಹಟ್ಟಿ ಶೇಖರ್ ಆರೋಪಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಆಪ್ ನಾಯಕ, ಜಾತಿ ಕಾರಣಕ್ಕೆ ಪ್ರವೇಶ ನಿರಾಕರಿಸಿದ್ದರೆ ಖಂಡನೀಯ ಎಂದರು.

ಈ ಹಿಂದೆ ನಾನು ಬಿಜೆಪಿಯಲ್ಲಿದ್ದಾಗ ಹಲವು ಸಭೆಗಳಿಗೆ ಆಹ್ವಾನವೇ ನೀಡುತ್ತಿರಲಿಲ್ಲ. ನಿಖರ ಕಾರಣ ಹೇಳದೆ ದೂರುವಿಡುತ್ತಿದ್ದರು. ಆದರೆ ಗೂಳಿಹಟ್ಟಿ ಶೇಖರ್ ಹೇಳಿಕೆ ನಂತರ ಮನವರಿಕೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಇದೇ ವೇಳೆ, ವೈಜ್ಞಾನಿಕವಾಗಿ ಮೀಸಲಾತಿ ಸೌಲಭ್ಯ ದೊರೆಯಲು ದೇಶಾದ್ಯಂತ ಜಾತಿ ಗಣತಿ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷದ ಅಧ್ಯಕ್ಷರು ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.