ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಸಭೆಗೆ?: ಕಾಂಗ್ರೆಸ್ ನಲ್ಲಿ ಹರಿದಾಡುತ್ತಿದೆ ಹೀಗೊಂದು ವದಂತಿ!
2024ರ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಕಾಂಗ್ರೆಸ್ ಹೊಂದಿದ್ದು, ಈ ವರ್ಷ ನಡೆದ ವಿಧಾನಸಭೆ ಚುನಾವಣೆಗಳಲ್ಲಿ ಕರ್ನಾಟಕ ಹಾಗೂ ಇತ್ತೀಚೆಗೆ ತೆಲಂಗಾಣ ಗೆದ್ದಿದ್ದು ಪಕ್ಷಕ್ಕೆ ಕನಸುಗಳು ಚಿಗುರೊಡೆಯುವಂತೆ ಮಾಡಿದೆ.

ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಕಾಂಗ್ರೆಸ್ ಹೊಂದಿದ್ದು, ಈ ವರ್ಷ ನಡೆದ ವಿಧಾನಸಭೆ ಚುನಾವಣೆಗಳಲ್ಲಿ ಕರ್ನಾಟಕ ಹಾಗೂ ಇತ್ತೀಚೆಗೆ ತೆಲಂಗಾಣ ಗೆದ್ದಿದ್ದು ಪಕ್ಷಕ್ಕೆ ಕನಸುಗಳು ಚಿಗುರೊಡೆಯುವಂತೆ ಮಾಡಿದೆ. ಇದಾದ ಬಳಿಕ ಕಾಂಗ್ರೆಸ್ ನಲ್ಲಿ ಕೇಳಿಬರುತ್ತಿರುವ ಸುದ್ದಿಯೆಂದರೆ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗುವುದು ಎಂಬುದು.
ನೆರೆಯ ಆಂಧ್ರಪ್ರದೇಶದ ಹೊರತಾಗಿ, ತೊಂಬತ್ತರ ದಶಕದಲ್ಲಿ ಈ ರಾಜ್ಯಗಳಲ್ಲಿ ಪಕ್ಷವು ಹೊಂದಿದ್ದ ಪ್ರಾಬಲ್ಯವನ್ನು ಮರುಸ್ಥಾಪಿಸಲು ಈಗ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಆಡಳಿತವಿರುವ ಎರಡು ರಾಜ್ಯಗಳಲ್ಲಿ ಪಕ್ಷದ ಶ್ರೇಣಿ ಮತ್ತು ನೈತಿಕತೆಯನ್ನು ಹೆಚ್ಚಿಸುವ ಆಲೋಚನೆಯನ್ನು ಪಕ್ಷ ಹೊಂದಿದೆ ಎಂದು ರಾಜಕೀಯ ಪಂಡಿತರು ಹೇಳುತ್ತಿದ್ದಾರೆ. ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಐಎನ್‌ಡಿಐಎ ಬಣದ ಭಾಗವಾಗಿರುವುದರಿಂದ ಇದು ದಕ್ಷಿಣದಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಾವವನ್ನು ಹೆಚ್ಚಿಸಬಹುದು ಎಂದು ಹೇಳಲಾಗುತ್ತಿದೆ.
ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಪಕ್ಷದ ಗೆಲುವಿನ ಗತಿಯನ್ನು ಕಾಪಾಡಿಕೊಳ್ಳುವುದು ದೇಶದ ಅತ್ಯಂತ ಹಳೆಯ ಪಕ್ಷಕ್ಕೆ ಮುಖ್ಯವಾಗಿದೆ, ಅದರಲ್ಲೂ ವಿಶೇಷವಾಗಿ ಬಿಜೆಪಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರ ಇಮೇಜ್ ನ್ನು ಬಳಸಿಕೊಂಡು ಚುನಾವಣೆ ಎದುರಿಸಲು ನೋಡುತ್ತಿರುವಾಗ ಇದು ಮುಖ್ಯವಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ರಾಜ್ಯದ ನಾಯಕರು ಈ ವಿಷಯವನ್ನು ಸೋನಿಯಾ ಗಾಂಧಿ ಅವರ ಮುಂದೆ ಪ್ರಸ್ತಾವನೆಯನ್ನು ಮಂಡಿಸಲು ಉತ್ಸುಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ರಾಯ್ ಬರೇಲಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದೆ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರು ಮುಂದಿನ ಬಾರಿ ಸ್ಪರ್ಧಿಸುವ ಸಾಧ್ಯತೆಯಿದೆ. ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕತ್ವ ಸೂಕ್ತ ಸಮಯದಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರೊಬ್ಬರು ಹೇಳುತ್ತಾರೆ.
ಏಪ್ರಿಲ್ 2, 2024 ರಂದು, ಕರ್ನಾಟಕದ ಮೂವರು ಕಾಂಗ್ರೆಸ್ ರಾಜ್ಯಸಭಾ ಸದಸ್ಯರಾದ ಡಾ ಎಲ್ ಹನುಮಂತಯ್ಯ, ಸೈಯದ್ ನಾಸೀರ್ ಹುಸೇನ್ ಮತ್ತು ಜಿ ಸಿ ಚಂದ್ರಶೇಖರ್ -- ನಿವೃತ್ತರಾಗುತ್ತಿದ್ದಾರೆ. ಅವರನ್ನು ಮರುನಾಮಕರಣ ಮಾಡಬೇಕೇ ಅಥವಾ ಬೇಡವೇ ಎಂದು ಪಕ್ಷದ ನಾಯಕತ್ವವು ತೀರ್ಮಾನ ಕೈಗೊಳ್ಳಲಿದೆ. 136 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಎಲ್ಲಾ ಮೂರು ಸ್ಥಾನಗಳನ್ನು ಉಳಿಸಿಕೊಳ್ಳಬಹುದು.
ಕರ್ನಾಟಕದಿಂದ ನಾಮನಿರ್ದೇಶನಗೊಳ್ಳುವ ಪ್ರಸ್ತಾಪವನ್ನು ಸೋನಿಯಾ ಗಾಂಧಿ ಒಪ್ಪಿಕೊಂಡರೆ, ಯಾರೂ ತಮ್ಮ ಸ್ಥಾನವನ್ನು ತ್ಯಾಗ ಮಾಡಲು ನಿರಾಕರಿಸುವುದಿಲ್ಲ. ಈ ಬಗ್ಗೆ ತೀರ್ಮಾನ ಕೈಗೊಳ್ಳಲು ನಮಗೆ ಇನ್ನೂ ಸ್ವಲ್ಪ ಸಮಯವಿದೆ. ಸದ್ಯಕ್ಕೆ ನಾವು ಈ ಬಗ್ಗೆ ಸೋನಿಯಾ ಗಾಂಧಿ ಅವರ ಬಳಿ ಪ್ರಸ್ತಾಪಿಸಿಲ್ಲ ಎಂದು ಕೆಪಿಸಿಸಿ ಹಿರಿಯ ನಾಯಕರೊಬ್ಬರು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


