ರಾಜ್ಯದಲ್ಲಿರುವುದು 'ಪೇ ಸಿಎಂ, ಪೇ ಡಿಸಿಎಂ' ಸರ್ಕಾರ: ಶಾಸಕ ಯತ್ನಾಳ್ ವಾಗ್ದಾಳಿ
ರಾಜ್ಯದಲ್ಲಿರುವುದು 'ಪೇ ಸಿಎಂ, ಪೇ ಡಿಸಿಎಂ' ಸರ್ಕಾರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದರು.

ಬೆಳಗಾವಿ: ರಾಜ್ಯದಲ್ಲಿರುವುದು 'ಪೇ ಸಿಎಂ, ಪೇ ಡಿಸಿಎಂ' ಸರ್ಕಾರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದರು.
ಸದನದ ಶೂನ್ಯ ವೇಳೆಯಲ್ಲಿ ಮಾತನಾಡಿದ ಯತ್ನಾಳ್ ಅವರು, ಸರ್ಕಾರಿ ಇಲಾಖೆಗಳ ಕಾಮಗಾರಿ ನಿರ್ವಹಿಸಿದ ರಾಜ್ಯದ ಗುತ್ತಿಗೆದಾರರಿಗೆ ಹಣ ಪಾವತಿಸದೆ ಕಡೆಗಣಿಸಲಾಗುತ್ತಿದೆ. ಹೊರ ರಾಜ್ಯದ ಗುತ್ತಿಗೆದಾರರ ಬಿಲ್ ಗಳನ್ನು ಮಂಜೂರು ಮಾಡಲು ಸರ್ಕಾರ ಆಸಕ್ತಿ ತೋರಿಸುತ್ತಿದೆ ಎಂದು ಆರೋಪಿಸಿದರು.
ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡದೆ ಕಾಮಗಾರಿಗಳು ಕುಠಿತವಾಗಿದೆ. ನಮ್ಮ ಸರ್ಕಾರವನ್ನು ಪೇಟಿಎಂ ಸರ್ಕಾರ ಎಂದು ಹೇಳುತ್ತಿದ್ದರು. ಇದು ಪೇ ಸಿಎಂ ಸರ್ಕಾರ ಆಗಿದೆ. ಈ ಸರ್ಕಾರದಲ್ಲಿ ಪೇ ಸಿಎಂ, ಪೇ ಡಿಸಿಎಂ ಎಂಬ ದೊಡ್ಡ ಹಗರಣ ನಡೆದಿದೆ. ಸರ್ಕಾರದ ಕಮಿಷನ್ ಶೇ.80 ಕ್ಕೆ ಬಂದು ನಿಂತಿದೆ ಎಂದು ವಾಗ್ದಾಳಿ ನಡೆಸಿದರು.
ಯತ್ನಾಳ್ ಆರೋಪಕ್ಕೆ ಆಡಳಿತ ಪಕ್ಷದ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ರಾಜಕೀಯ ದುರುದ್ದೇಶದಿಂದ ಆರೋಪ ಮಾಡಿತ್ತಿದ್ದಾರೆ ಎಂದು ತಿರುಗೇಟು ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


