2024 ಲೋಕಸಭಾ ಚುನಾವಣೆ: ಕಾಂಗ್ರೆಸ್ ನಿಂದ ಟಿಕೆಟ್ ಆಫರ್ ನೀಡಿದ ಡಿಕೆಶಿ; ಶಿವಣ್ಣ ಹೇಳಿದ್ದು ಹೀಗೆ...
ಮುಂಬರುವ ಲೋಕಸಭಾ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಸಿದ್ಧತೆ ಈಗಾಗಲೇ ಆರಂಭವಾಗಿರುವಂತೆಯೇ, ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ಆಫರ್ ನೀಡಿದ್ದಾರೆ.

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಸಿದ್ಧತೆ ಈಗಾಗಲೇ ಆರಂಭವಾಗಿರುವಂತೆಯೇ, ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ಆಫರ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಈಡಿಗ ಸಮುದಾಯದ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪಾರ್ಲಿಮೆಂಟಿಗೆ ತಯಾರಿಯಾಗಲು ಶಿವಣ್ಣಗೆ ಹೇಳಿದ್ದೇನೆ. ಅವರು ಯಾವ ಕ್ಷೇತ್ರದಿಂದಲೂ ಸ್ಪರ್ಧಿಸಿದರೂ ಟಿಕೆಟ್ ನೀಡುವುದಾಗಿ ಹೇಳಿರುವುದಾಗಿ ತಿಳಿಸಿದರು.
ಆದರೆ, ಶಿವಣ್ಣ ಈಗಾಗಲೇ ಐದಾರು ಸಿನಿಮಾಗಳನ್ನು ಒಪ್ಪಿಕೊಂಡಿದ್ದು, ಅವುಗಳ ಚಿತ್ರೀಕರಣ ಮುಗಿಯಬೇಕು ಎಂದಿದ್ದಾರೆ. ಚಿತ್ರ ಯವಾಗದರೂ ಮಾಡಬಹುದು, ಆದರೆ ಪಾರ್ಲಿಮೆಂಟ್ ಹೋಗುವ ಅವಕಾಶ ಎಲ್ಲರಿಗೂ ಸಿಗಲ್ಲ ಎಂದು ಹೇಳಿದ್ದೇನೆ. ಅವರ ನಿರ್ಧಾರಕ್ಕೆ ಎದುರು ನೋಡುತ್ತಿದ್ದೇನೆ ಎಂದರು.
ನಂತರ ಮಾತನಾಡಿದ ಶಿವರಾಜ್ ಕುಮಾರ್, ನಮ್ಮದೇನಿದ್ದರೂ ಮೇಕಪ್ ಹಾಕೋದು ಸಿನಿಮಾ ಮಾಡೋದು. ನಾನು ಎಂದಿಗೂ ರಾಜಕೀಯಕ್ಕೆ ಬರೋಲ್ಲ. ನಮ್ಮ ತಂದೆ ಬಣ್ಣ ಹಚ್ಚಿ ನಟನೆ ಮಾಡುವುದನ್ನು ಕೇಳಿ ಕೊಟ್ಟಿದ್ದಾರೆ. ಅದೇ ಸಾಕು ನಮಗೆ. ನಮ್ಮ ತಂದೆ ಕೊಟ್ಟಿರುವ ಬಳುವಳಿ ಬಣ್ಣ ಹಚ್ಚೋದನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ರಾಜಕೀಯ ನಮಗೆ ಬೇಡ ಎಂದರು.
ಆದರೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಮಗಳು ನಮ್ಮನೆ ಸೊಸೆಯಾಗಿದ್ದಾರೆ. ಗೀತಾ ಬೇಕಾದ್ರೆ ರಾಜಕೀಯಕ್ಕೆ ಹೋಗಲಿ, ಹೆಂಡತಿ ಇಷ್ಟಪಟ್ಟರೆ ಅವರಿಗೆ ಸಪೋರ್ಟ್ ಮಾಡೋದು ಗಂಡನ ಕೆಲಸ. ಅವರು ಚುನಾವಣೆಗೆ ನಿಲ್ಲುತ್ತಾರೆಂದರೆ ಅವರ ಹಿಂದೆ ನಿಂತು ಬೆಂಬಲ ಕೊಡುತ್ತೇನೆ ಎಂದು ಶಿವಣ್ಣ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


