ಆರ್ಟಿಕಲ್ 370 ರದ್ದು ಎತ್ತಿಹಿಡಿದ ಸುಪ್ರೀಂ ಕೋರ್ಟ್; ತೀರ್ಪು ಸ್ವಾಗತಿಸಿದ ಮಾಜಿ ಪ್ರಧಾನಿ ದೇವೇಗೌಡ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು, ಇತರ...

ಹಾಸನ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು, ಇತರ ರಾಜ್ಯಗಳಂತೆ ಜಮ್ಮು ಮತ್ತು ಕಾಶ್ಮೀರಕ್ಕೂ ದೇಶದ ಕಾನೂನು ಅನ್ವಯಿಸುತ್ತದೆ ಎಂದು ಸೋಮವಾರ ಹೇಳಿದ್ದಾರೆ.
ತಮ್ಮ ಹುಟ್ಟೂರಾದ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಐವರು ಸದಸ್ಯರ ಪೀಠ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದು ಸರ್ವಾನುಮತದ ತೀರ್ಪು ನೀಡಿದೆ. ಈ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ ಎಂದರು.
2024ರ ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರ್ಕಾರ ಪತನವಾಗಲಿದೆ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ ಇತ್ತೀಚಿನ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ದೇವೇಗೌಡರು ನಿರಾಕರಿಸಿದರು.
2024ರ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿದ್ದು, ಹಾಸನ ಲೋಕಸಭಾ ಕ್ಷೇತ್ರಕ್ಕೆ ಹಾಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಪಕ್ಷದ ಅಧಿಕೃತ ಅಭ್ಯರ್ಥಿಯಾಗಲಿದ್ದಾರೆ ಎಂದು ಮಾಜಿ ಪ್ರಧಾನಿ ಪುನರುಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


