ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಬುಧವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ: ಆರ್ ಅಶೋಕ್
ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು.

ಬೆಳಗಾವಿ: ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮರ್ಪಕವಾಗಿ ಬರ ನಿರ್ವಹಣೆ ಮಾಡದಿರುವುದು, ಡಿ.ಕೆ. ಶಿವಕುಮಾರ್ ಅವರ ವಿಷಯದಲ್ಲಿ ತೆಗೆದುಕೊಂಡ ನಿಲುವು ಮತ್ತು ಜಮೀರ್ ಅಹ್ಮದ್ ಅವರ ನಡೆ ಸೇರಿದಂತೆ ಸರ್ಕಾರದ ವೈಫಲ್ಯ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಜಮೀರ್ ಅಹ್ಮದ್ ಖಾನ್ ಸಚಿವರಾಗಿ ಸ್ಪೀಕರ್ ಸ್ಥಾನದ ಕುರಿತು ದುರಹಂಕಾರದ ಹೇಳಿಕೆ ನೀಡಿದ್ದು ಖಂಡನೀಯ. ಜಮೀರ್ ಅವರ ಹೇಳಿಕೆ ವಿರುದ್ಧ ಮುಖ್ಯಮಂತ್ರಿಯಾಗಲಿ, ಸ್ಪೀಕರ್ ಅವರಾಗಲಿ ಕ್ರಮ ತೆಗೆದುಕೊಳ್ಳಲಿಲ್ಲ. ಸಂವಿಧಾನ ಉಳಿಸಲು ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿ ಜಮೀರ್ ಅಹ್ಮದ್ ಅವರ ಹೇಳಿಕೆ ಖಂಡಿಸಿ ಸತ್ಯಾಗ್ರಹ ಮಾಡುತ್ತಿದ್ದೇವೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


