ಸಿದ್ದರಾಮಯ್ಯ ಸರ್ಕಾರ ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ: ಬಿ.ವೈ ವಿಜಯೇಂದ್ರ ಆರೋಪ
ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ವಸ್ತ್ರಕ್ಕೆ ಅನುಮತಿ ನೀಡುವ ಮೂಲಕ ಸಿದ್ದರಾಮಯ್ಯ ಅವರ ಸರ್ಕಾರವು, ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ. ಎಲ್ಲರನ್ನೂ ಒಳಗೊಳ್ಳುವ ಕಲಿಕೆಯ ವಾತಾವರಣಕ್ಕೆ ಇದು ಹಿನ್ನಡೆಯಾಗಲಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ–ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವುದನ್ನು ನಿಷೇಧಿಸಿದ್ದನ್ನು ವಾಪಸ್ ಪಡೆಯಲು ಸೂಚಿಸಿದ್ದೇನೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಹಿಜಾಬ್ ನಿಷೇಧ ವಾಪಸ್ ಪಡೆಯುವ ನಿರ್ಧಾರ ಶಿಕ್ಷಣ ಸಂಸ್ಥೆಗಳಲ್ಲಿ ಇರುವ ಜಾತ್ಯತೀತ ಸ್ವರೂಪವನ್ನು ಪ್ರಶ್ನಿಸುವಂತಿದೆ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ವಸ್ತ್ರಕ್ಕೆ ಅನುಮತಿ ನೀಡುವ ಮೂಲಕ ಸಿದ್ದರಾಮಯ್ಯ ಅವರ ಸರ್ಕಾರವು, ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ. ಎಲ್ಲರನ್ನೂ ಒಳಗೊಳ್ಳುವ ಕಲಿಕೆಯ ವಾತಾವರಣಕ್ಕೆ ಇದು ಹಿನ್ನಡೆಯಾಗಲಿದೆ ಎಂದು ಅವರು ಬರೆದುಕೊಂಡಿದ್ದಾರೆ.
ವಿಭಜಿಸುವ ಪ್ರಕ್ರಿಯೆಗಳನ್ನು ಮೀರಿ ಶಿಕ್ಷಣಕ್ಕೆ ಆದ್ಯತೆ ನೀಡುವುದು ಮತ್ತು ಧಾರ್ಮಿಕ ಆಚರಣೆಗಳ ಪ್ರಭಾವವಿಲ್ಲದೆ ವಿದ್ಯಾರ್ಥಿಗಳು ಶಿಕ್ಷಣದ ಮೇಲೆ ಗಮನ ಕೇಂದ್ರೀಕರಿಸುವ ವಾತಾವರಣವನ್ನು ಸೃಜಿಸುವುದು ಮುಖ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


