ವಿದೇಶಿ ಜೀನ್ಸ್ ಎಂದೂ ಭಾರತೀಯತೆಯನ್ನು ಒಪ್ಪುವುದೇ ಇಲ್ಲ: ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿ!
ವಿದೇಶಿ ಜೀನ್ಸ್ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ.

ಬೆಂಗಳೂರು: ವಿದೇಶಿ ಜೀನ್ಸ್ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಕಲುಷಿತ ಮನಸ್ಸಿನ ರಾಜ್ಯ ಕಾಂಗ್ರೆಸ್ ಕಣ್ಣಿಗೆ ಸದಾ ಕಾಮಾಲೆಯೇ, ಹೆಚ್.ಡಿ. ಕುಮಾರಸ್ವಾಮಿ ಅವರ ನಿಂದನೆಯೇ ಅದಕ್ಕೆ ಅಂಟಿದ ಬೇನೆ. ದೇಶವನ್ನೇ ಒಡೆದ ಪಕ್ಷಕ್ಕೆ ಹಿಂದುತ್ವವೂ ರುಚಿಸುವುದಿಲ್ಲ. ನಮ್ಮ ಆದರ್ಶ ಪರಂಪರೆಯೂ ಆಗುವುದಿಲ್ಲ. ಅಷ್ಟೇ ಏಕೆ, ಭಾರತವೂ ಸಹ್ಯವಲ್ಲ! ಅದರ , ವಿದೇಶಿ ಜೀನ್ಸ್ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ. ಇದೇನು ಹೊಸತಲ್ಲ ಎಂದು ಕಿಡಿಕಾರಿದೆ.
ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕುಮಾರಸ್ವಾಮಿ ಅವರು ಮುಕ್ತ ಮನಸ್ಸಿನಿಂದ ಭೇಟಿ ನೀಡಿದ್ದರು, ಹೌದು. ಅಲ್ಲಿನ ಶೈಕ್ಷಣಿಕ ವಾತಾವರಣ, ಮಕ್ಕಳ ಶಿಸ್ತು, ದೇಶಪ್ರೇಮವನ್ನು ಕಣ್ಣಾರೆ ಕಂಡ ಅವರ ಮನಸ್ಸಿನಲ್ಲಿ ಪರಿವರ್ತನೆ ಆಗಿದ್ದರೆ, ಅದೇನು ಮಹಾ ಅಪರಾಧವೇ? ಎಂದು ಪ್ರಶ್ನಿಸಿದೆ.
ಪರಿವರ್ತನೆಯೇ ಜಗದ ನಿಯಮ, ಪ್ರತಿಗಾಮಿತನವೇ ಮಾರಣಹೋಮ. ತುಷ್ಠೀಕರಣದ ಅಂಟುವ್ಯಾಧಿಯಿಂದ ಬಳಲುತ್ತಿರುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಮಾರಣಹೋಮದಲ್ಲಿಯೇ ನಂಬಿಕೆ! ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಜತೆ ರಾಜ್ಯದ ಅಭಿವೃದ್ಧಿಯ ಬಗ್ಗೆಯೇ ಕುಮಾರಸ್ವಾಮಿ ಅವರು ಚರ್ಚಿಸಿದ್ದಾರೆ. ಸಂಶಯ ಪಿಶಾಚಿ ಕಾಂಗ್ರೆಸ್ಸಿಗೆ ಹುಳುಕು ಹುಡುಕುವುದೇ ಚಟ. ಜಾತಿ, ಧರ್ಮಗಳನ್ನು ಒಡೆದು ದೇಶಕ್ಕೆ ಶಾಪವಾಗಿ, ಬೆದರಿಕೆಯಾಗಿರುವ ಪ್ರತಿಗಾಮಿ ಪಕ್ಷಕ್ಕೆ ಶಾಂತಿ, ಸೌಹಾರ್ದತೆ ಎಂದರೇನೇ ಅಪಥ್ಯ ಎಂದು ಟೀಕಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


