ರಾಜಕೀಯ

ಶಿವಾನಂದ ಪಾಟೀಲ ಬೇಷರತ್ ಕ್ಷಮೆ ಕೇಳಬೇಕು: ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಸಚಿವರು ಬೇಷರತ್ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಶಿವಾನಂದ ಪಾಟೀಲ ಬೇಷರತ್ ಕ್ಷಮೆ ಕೇಳಬೇಕು: ಹೆಚ್ ಡಿ ಕುಮಾರಸ್ವಾಮಿ ಒತ್ತಾಯ
ಹೆಚ್. ಡಿ. ಕುಮಾರಸ್ವಾಮಿ, ಶಿವಾನಂದ ಪಾಟೀಲ
Published On :

ಬೆಂಗಳೂರು: ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಸಚಿವರು ಬೇಷರತ್ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಕುಮಾರಸ್ವಾಮಿ, ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು ಎಂದಿದ್ದಾರೆ. 

ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ  ವಾಪಸ್ ಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.