ಲೋಕಸಭಾ ಚುನಾವಣೆ 2024: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಸ್ಪರ್ಧೆ?
2024ರ ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ಈ ನಡುವಲ್ಲೇ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಪಡೆಯಲು ಹಲವರ ಹೆಸರುಗಳು ಕೇಳಿಬರುತ್ತಿದೆ.

ಚಿಕ್ಕಮಗಳೂರು: 2024ರ ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ಈ ನಡುವಲ್ಲೇ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಪಡೆಯಲು ಹಲವರ ಹೆಸರುಗಳು ಕೇಳಿಬರುತ್ತಿದೆ.
ಈ ಆಕಾಂಕ್ಷಿಗಳ ಪಟ್ಟಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಸಿ.ಟಿ.ರವಿ, ಡಿ.ಎನ್.ಜೀವರಾಜ್ ಕೂಡ ಸೇರಿದ್ದಾರೆ.
ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಕಾರ್ಯಕರ್ತರು ರವಿ ಅವರನ್ನು ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿದ್ದು, ಇದಕ್ಕೆ ರವಿಯವರು ಮೌನ ಒಪ್ಪಿಗೆ ನೀಡಿದ್ದರು ಎಂದು ತಿಳಿದುಬಂದಿದೆ.
ಇನ್ನು ಉಡುಪಿಯ ಮಧ್ವರಾಜ್ ಅವರು, ಕಳೆದ ಎರಡು ತಿಂಗಳಿಂದ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವುದು ಕಂಡು ಬಂದಿದೆ. ಗಣೇಶ ಚತುರ್ಥಿ ಮತ್ತು ವಿಜಯದಶಮಿ ಹಬ್ಬದ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದರು, ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡಿದರೆ ಸ್ಪರ್ಧೆಗೆ ಸಿದ್ದ ಎಂಬುದನ್ನು ಪರೋಕ್ಷವಾಗಿ ಈ ಮೂಲಕ ಹೇಳುವ ಪ್ರಯತ್ನ ಮಾಡಿದ್ದರು.
ಈ ನಡುವೆ ಹಾಲಿ ಸಂಸದ ಡಿವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ ಹಾಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಒಕ್ಕಲಿಗ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸೂಚಿಸುವ ಸಾಧ್ಯತೆಗಳಿವೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ಆದರೆ, ಕಳೆದ ಕೆಲ ದಿನಗಳಿಂದ ದತ್ತ ಜಯಂತಿ ಉತ್ಸವಕ್ಕೆ ಚಿಕ್ಕಮಗಳೂರಿನಲ್ಲಿ ಮೊಕ್ಕಾಂ ಹೂಡಿರುವ ಕರಂದ್ಲಾಜೆ ಅವರು ಅಷ್ಟಾಗಿ ಒಲವು ತೋರಿರಲಿಲ್ಲ. ಆಧರೆ, ಶೋಭಾ ಯಾತ್ರೆಯ ವೇಳೆ ಭಾಗಿಯಾಗಿ ಉಡುಪಿ-ಚಿಕ್ಕಮಗಳೂರಿನಿಂದ ಮತ್ತೆ ಸ್ಪರ್ಧಿಸುವ ಸುಳಿವನ್ನು ನೀಡಿದ್ದಾರೆ.
ಶೋಭಾ ಯಾತ್ರೆ ವೇಳೆ ಮಾತನಾಡಿರುವ ಶೋಭಾ ಕರಂದ್ಲಾಜೆಯವರು, ಕೇಂದ್ರ ಸರ್ಕಾರದ ಅನುದಾನದಿಂದ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಕಾರ್ಯಗಳ ಮೇಲೆ ಮತಯಾಚನೆ ಮಾಡುವಂತೆ ಹೇಳಿದ್ದಾರೆ. ಇದಕ್ಕಾಗಿ ಭಾರತ ಸಂಕಲ್ಪ ಯಾತ್ರೆ ನಡೆಯುತ್ತಿದೆ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರದ ಹಣ ತಂದಿದ್ದೇನೆ.
ನನ್ನ ಪ್ರಯತ್ನದ ಫಲವಾಗಿ ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಎರಡು ಕೇಂದ್ರೀಯ ವಿದ್ಯಾಲಯ ಶಾಲೆಗಳನ್ನು ಸ್ಥಾಪಿಸಲಾಯಿತು. ವೈದ್ಯಕೀಯ ಕಾಲೇಜು ಮಂಜೂರಾಗಿದ್ದು, ಕಾಲೇಜುಗಳಿಗೆ ಮೂಲಸೌಕರ್ಯ ಕಲ್ಪಿಸಲು ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಎಲ್ಲಾ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಜಿಲ್ಲೆಯಲ್ಲಿ ರಸ್ತೆ, ರೈಲ್ವೆ, ಕುಡಿಯುವ ನೀರಿನ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


