ಯಾರೋ ನನಗೆ ಮಾಟ ಮಾಡಿಸಿರಬಹುದೋ ಏನೋ; ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು: ವಿ.ಸೋಮಣ್ಣ
ಯಾರೋ ನನಗೆ ಮಾಟ ಮಾಡಿಸಿರಬಹುದೋ ಏನೋ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದು ಬಿಜೆಪಿ ಮಾಜಿ ಸಚಿವ ವಿ.ಸೋಮಣ್ಣ ಸ್ವಪಕ್ಷೀಯರ ವಿರುದ್ಧ ಮತ್ತೆ ಬೇಸರ ಹೊರಹಾಕಿದ್ದಾರೆ.

ಬೆಂಗಳೂರು: ಯಾರೋ ನನಗೆ ಮಾಟ ಮಾಡಿಸಿರಬಹುದೋ ಏನೋ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದು ಬಿಜೆಪಿ ಮಾಜಿ ಸಚಿವ ವಿ.ಸೋಮಣ್ಣ ಸ್ವಪಕ್ಷೀಯರ ವಿರುದ್ಧ ಮತ್ತೆ ಬೇಸರ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಅನ್ಯಾಯ ಆಗಿದೆ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ. ಗೋವಿಂದರಾಜನಗರ ಕ್ಷೇತ್ರ ಬಿಡಬಾರದಿತ್ತು. ಆಗ ಯಾರಾದ್ರು ನನಗೆ ಮಾಟ ಮಂತ್ರ ಮಾಡಿಸಿದ್ದರೇನೋ, ಕ್ಷೇತ್ರ ಬಿಟ್ಟೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು. ಜನವರಿ 9ಕ್ಕೆ ದೆಹಲಿಯಲ್ಲಿ ವರಿಷ್ಠರ ಭೇಟಿ ಆಗುತ್ತೇನೆ, ನನಗೆ ಆದ ಅನ್ಯಾಯವನ್ನ ವರಿಷ್ಠರ ಬಳಿ ಹೇಳುತ್ತೇನೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಹೇಳಿದ್ದಾರೆ.
ವಿಜಯನಗರದ ಕಚೇರಿಯಲ್ಲಿ ವಿ.ಸೋಮಣ್ಣ ಪ್ರತಿಷ್ಠಾನದಿಂದ ಕ್ಯಾಲೆಂಡರ್ ಬಿಡುಗಡೆ ಮತ್ತು ಕುವೆಂಪು ಜಯಂತಿ ಆಚರಣೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾವುಕರಾಗಿ ಮಾತನಾಡಿದ ಸೋಮಣ್ಣ ಅವರು ನನಗೆ ಆಗಿರುವ ಅನಾನುಕೂಲ ಯಾರಿಗೂ ಆಗುವುದು ಬೇಡ. ಹೊಸ ವರ್ಷ ಆರಂಭವಾಗುತ್ತಿದೆ. ಹಳೆಯ ಕಹಿ ಘಟನೆ ಮರೆತು ಮುಂದೆ ಹೊಸ ವರ್ಷದಲ್ಲಿ ಮುನ್ನೆಡೆಯೋಣ ಎಂದರು.
ನಮ್ಮ ಮೇಲೆ ಪ್ರಹಾರ ಆಗದಂತೆ ಎಲ್ಲರಿಗೂ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ರಾಷ್ಟ್ರೀಯ ನಾಯಕರ ನಿಲುವೇ ನನ್ನ ನಿಲುವು. ನನ್ನ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ. ರಾಷ್ಟ್ರೀಯ ನಾಯಕರು ಏನು ಹೇಳುತ್ತಾರೋ ಹಾಗೆಯೇ ನಡೆದುಕೊಳ್ಳುತ್ತೇನೆ ಎನ್ನುವ ಮೂಲಕ ಪರೋಕ್ಷವಾಗಿ ಪಕ್ಷ ಬಿಡುವುದಿಲ್ಲ ಎಂಬ ಸಂದೇಶವನ್ನು ಸೋಮಣ್ಣ ರವಾನೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


