ಲೋಕಸಭೆ ಚುನಾವಣೆಯಲ್ಲಿ ಸಚಿವರ ಸ್ಪರ್ಧೆ ವಿಚಾರ ರಾಜ್ಯ ಕಾಂಗ್ರೆಸ್ ನಾಯಕರಿಗೆ ಬಿಟ್ಟದ್ದು: ಮಲ್ಲಿಕಾರ್ಜುನ ಖರ್ಗೆ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಸಚಿವರು ಸ್ಪರ್ಧಿಸುವ ಬಗ್ಗೆ ರಾಜ್ಯದ ನಾಯಕರು ನಿರ್ಧರಿಸುತ್ತಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಹೇಳಿದರು.

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಸಚಿವರು ಸ್ಪರ್ಧಿಸುವ ಬಗ್ಗೆ ರಾಜ್ಯದ ನಾಯಕರು ನಿರ್ಧರಿಸುತ್ತಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಹೇಳಿದರು.
ರಾಜ್ಯದಲ್ಲಿ ಕೆಲವು ಸಚಿವರನ್ನು ಲೋಕಸಭೆ ಚುನಾವಣೆ ಅಖಾಡಕ್ಕೆ ಇಳಿಸಲಾಗುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ ಅವರು, ನೀವು ಈ ಬಗ್ಗೆ ಇಲ್ಲಿನ ನಾಯಕರನ್ನು ಕೇಳಬೇಕು. ಇಲ್ಲಿ ಯಾರು ಒಳ್ಳೆಯವರು, ಯಾರು ಕೆಟ್ಟವರು ಎಂಬುದನ್ನು ರಾಜ್ಯ ಚುನಾವಣಾ ಸಮಿತಿ ನೋಡುತ್ತದೆ ಎಂದು ಹೇಳಿದರು.
ರಾಜ್ಯ ಚುನಾವಣಾ ಸಮಿತಿಯ ಅಭಿಪ್ರಾಯದ ಬಳಿಕ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮುಂದಿನ ನಿರ್ಧಾರ ಆಗುತ್ತದೆ. ಯಾರು ಸ್ಪರ್ಧೆ ಮಾಡಬೇಕು, ಯಾರು ಮಾಡಬಾರದು ಎಂಬುದನ್ನು ರಾಜ್ಯ ಚುನಾವಣಾ ಸಮಿತಿ ನಿರ್ಧಾರ ಮಾಡಿದ ಬಳಿಕ, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಗೆ ಬರುತ್ತದೆ. ಆಗ ಯಾರು ಅಭ್ಯರ್ಥಿಯಾಗಬೇಕು ಎಂಬುದನ್ನು ನಾವು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
ನಿಗಮ - ಮಂಡಳಿಗಳಿಗೆ ಅಧ್ಯಕ್ಷರ ನೇಮಕ ವಿಚಾರವಾಗಿ ಪ್ರತಿಕ್ರಿಯಿಸಿ, ನಿಗಮ-ಮಂಡಳಿ ನೇಮಕಾತಿಯನ್ನು ಆದಷ್ಟು ಬೇಗ ಮಾಡುತ್ತೇವೆ ಎಂದರು,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


