ಸಚಿವ ಸ್ಥಾನ ಸಿಗದಿರುವುದಕ್ಕೆ ಹತಾಶರಾಗಿ ರಮೇಶ್ ಜಾರಕಿಹೊಳಿ ಮಾತನಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್
ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದು, ಸಚಿವ ಸ್ಥಾನ ಸಿಗದ್ದಕ್ಕೆ ಹತಾಶರಾಗಿ ಮಾತನಾಡುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದು, ಸಚಿವ ಸ್ಥಾನ ಸಿಗದ್ದಕ್ಕೆ ಹತಾಶರಾಗಿ ಮಾತನಾಡುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.
ಜಾರಕಿಹೊಳಿ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಜಾರಕಿಹೊಳಿ ಮಾತುಗಳನ್ನು ಕೇಳಿದರೆ ಅಯ್ಯೋ ಎನಿಸುತ್ತದೆ. ರಮೇಶ್ ಜಾರಕಿಹೊಳಿಯವರನ್ನು ಬಿಜೆಪಿ ಆಸ್ಪತ್ರೆಗೆ ಸೇರಿಸಬೇಕು. ಸಿಡಿ ಪ್ರಕರಣ ತನಿಖೆ ಮಾಡಿಸಲು ಜಾರಕಿಹೊಳಿಯವರನ್ನು ಯಾರು ತಡೆದಿದ್ದಾರೆ. ಈ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ. ಅವರು ಯಾವ ತನಿಖೆಯನ್ನು ಬೇಕಾದರೂ ಮಾಡಲಿ ಎಂದು ಹೇಳಿದರು.
ಇನ್ನು ವಿದೇಶದಲ್ಲಿ ಡಿ.ಕೆ.ಶಿವಕುಮಾರ್ ಫ್ಲ್ಯಾಟ್ ಇದೆ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ, ಶೇ.10 ಆದರೂ ಬರುವ ಹಾಗೆ ಮಾಡಿ. ನಾನೇ ಹೋಗಿಬರುತ್ತೇನೆ. ಐ ವಿಷ್ ಹಿಮ್ ಆಲ್ ದ ಬೆಸ್ಟ್, ಶುಭವಾಗಲಿ ಯಶಸ್ಸಾಗಲಿ ಎಂದು ಜಾರಕಿಹೊಳಿಗೆ ಟಾಂಗ್ ನೀಡಿದರು.
ಚುನಾವಣೆಯಲ್ಲಿ ಭೇಟಿ ಮಾಡೋಣ ಎಂದಿದ್ದಾರೆ, ಭೇಟಿಯಾಗೋಣ. ಯಾವ ಆಸ್ತಿ, ಯಾವ ಆಡಿಯೋ ಬೇಕಾದರೂ ಮಾಡಿಕೊಳ್ಳಲಿ. ಅವರಲ್ಲಿ ಏನೇನು ಪಟ್ಟುಗಳು, ಆಸನಗಳು ಇದ್ದಾವೆ ತೋರಿಸಲಿ ನೋಡಿಕೋಳ್ತಿವಿ ಎಂದು ತಿರುಗೇಟು ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


