ರಾಜ್ಯ ವಿಧಾನಸಭೆ ಚುನಾವಣೆ: ಬಿಜೆಪಿ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಯಾಗಿ ಅಣ್ಣಾಮಲೈ ನೇಮಕ
ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯನ್ನಾಗಿ ಕೆ.ಅಣ್ಣಾಮಲೈ ಅವರನ್ನು ಬಿಜೆಪಿ ನೇಮಿಸಿದೆ.

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯನ್ನಾಗಿ ಕೆ.ಅಣ್ಣಾಮಲೈ ಅವರನ್ನು ಬಿಜೆಪಿ ನೇಮಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಲಹೆಯಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶನಿವಾರ ಈ ನೇಮಕದ ಆದೇಶವನ್ನು ಹೊರಡಿಸಿದ್ದಾರೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ. ಧರ್ಮೇಂದ್ರ ಪ್ರಧಾನ್ ಅವರು ಪ್ರಸ್ತುತ ಕೇಂದ್ರ ಶಿಕ್ಷಣ ಮಂತ್ರಿಯಾಗಿದ್ದಾರೆ. ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದ ಕೆ.ಅಣ್ಣಾಮಲೈ ಅವರು ಪ್ರಸ್ತುತ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದಾರೆ. ಪಕ್ಷ ಸಂಘಟನೆಯ ಹಿರಿಯ ವ್ಯಕ್ತಿಯಾಗಿರುವ ಪ್ರಧಾನ್ ಅವರು ಈ ಹಿಂದೆ ಹಲವು ಚುನಾವಣೆಗಳನ್ನು ನಿಭಾಯಿಸುವ ಜವಾಬ್ದಾರಿಯನ್ನು ಹೊತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


