ಯಡಿಯೂರಪ್ಪ ಪುತ್ರನಿಗೆ ಸ್ಥಾನ ನೀಡುವುದನ್ನು ತಪ್ಪಿಸಲು ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿಲ್ಲ: ಸಿದ್ದರಾಮಯ್ಯ
ಬಿಜೆಪಿ ಪ್ರಬಲ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಪುತ್ರನನ್ನು ಸಚಿವರನ್ನಾಗಿ ಮಾಡುವುದನ್ನು ತಪ್ಪಿಸುವ ಸಲುವಾಗಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಚಿವ ಸಂಪುಟ ವಿಸ್ತರಣೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಪ್ರಬಲ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಪುತ್ರನನ್ನು ಸಚಿವರನ್ನಾಗಿ ಮಾಡುವುದನ್ನು ತಪ್ಪಿಸುವ ಸಲುವಾಗಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಚಿವ ಸಂಪುಟ ವಿಸ್ತರಣೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಷ್ಟೇ ಅಲ್ಲದೆ ಸಂಪುಟ ವಿಸ್ತರಣೆ ಮಾಡದಿರಲು ಹಾಗೂ ತಮ್ಮ ಬಳಿಯೇ ಹಲವು ಖಾತೆಗಳನ್ನು ಇಟ್ಟುಕೊಂಡಿರುವುದಕ್ಕೆ ಹೆಚ್ಚೆಚ್ಚು ಲಂಚ ಸ್ವೀಕಾರ ನಡೆಯುತ್ತಿರುವುದು ಕೂಡ ಒಂದು ಕಾರಣವಾಗಿದೆ. ಯಡಿಯೂರಪ್ಪ ಅವರಿಗೆ ಬಿಜೆಪಿ ಅನ್ಯಾಯ ಮಾಡಿದೆ, ಆರ್‌ಎಸ್‌ಎಸ್‌ನೊಂದಿಗೆ ಸೇರಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಬಸವರಾಜ ಬೊಮ್ಮಾಯಿ ಅವರನ್ನು ಕರೆತಂದರು ಎಂದು ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಮಾಡದ ಕಾರಣ ಯಡಿಯೂರಪ್ಪ ಪುತ್ರನಿಗೆ ಸಚಿವ ಸ್ಥಾನ ನೀಡುವುದನ್ನು ತಪ್ಪಿಸಲು ಬೊಮ್ಮಾಯಿಯವರು ಸಚಿವ ಸಂಪುಟ ವಿಸ್ತರಣೆ ಮಾಡುತ್ತಿಲ್ಲ. ಹೀಗಾಗಿಯೇ ಯಡಿಯೂರಪ್ಪ ಹಾಗೂ ಬೊಮ್ಮಾಯಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ಸಂಪುಟ ವಿಸ್ತರಣೆ ಮಾಡದೆ, ಮುಖ್ಯಮಂತ್ರಿಗಳು ತಮ್ಮ ಬಳಿಯೇ ಹಲವು ಖಾತೆಗಳನ್ನು ಇಟ್ಟುಕೊಂಡು ಸುಮಾರು ಒಂದೂವರೆ ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಆದರೂ, ಸಂಪುಟ ವಿಸ್ತರಣೆ ಮಾಡುತ್ತಿಲ್ಲ. ಬೊಮ್ಮಾಯಿ ಅವರ ಬಳಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR), ಬೆಂಗಳೂರು ನಗರಾಭಿವೃದ್ಧಿ ಮತ್ತು ಹಣಕಾಸು ಸೇರಿದಂತೆ ಸುಮಾರು ಎಂಟು ಖಾತೆಗಳಿವೆ. ಬಹುತೇಕ ನಾಲ್ಕನೇ ಒಂದು ಭಾಗದಷ್ಟು ಖಾತೆಗಳು ಮುಖ್ಯಮಂತ್ರಿಯವರ ಬಳಿ ಇವೆ ಎಂದು ತಿಳಿಸಿದರು.
ಈ ಹಿಂದೆ ಹಲವು ಬಾರಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಬೊಮ್ಮಾಯಿಯವರು, ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಜತೆ ಚರ್ಚೆ ನಡೆಸಲಾಗಿದ್ದು, ಅವರಿಂದ ಅನುಮತಿ ದೊರೆತ ಕೂಡಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದರು. ಆದರೆ, ಈ ವರೆಗೂ ಅಂತಹ ಯಾವುದೇ ಕಸರತ್ತುಗಳನ್ನೂ ನಡೆಸಲಾಗಿಲ್ಲ. ಮೇ ವೇಳೆಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


