ಕಲಬುರಗಿ: ಲಂಬಾಣಿ ಮಹಿಳೆಯರೊಂದಿಗೆ ಹೆಜ್ಜೆ ಹಾಕಿದ ಸಿದ್ದರಾಮಯ್ಯ- ವಿಡಿಯೋ
ಕಲಬುರಗಿಯಲ್ಲಿಂದು ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ, ಲಂಬಾಣಿ ಮಹಿಳೆಯೊಂದಿಗೆ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು.

ಬೆಂಗಳೂರು: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ಸಿದ್ದರಾಮಯ್ಯ, ಉತ್ಸಾಹ, ಹುರುಪಿನಲ್ಲಿಯೇ ರಾಜ್ಯ ಸುತ್ತುತಿದ್ದು ಸಭೆ, ಸಮಾರಂಭಗಳಲ್ಲಿ ಲವಲವಿಕೆಯಿಂದ
ಪಾಲ್ಗೊಳ್ಳುತ್ತಿದ್ದಾರೆ.
ಕಲಬುರಗಿಯಲ್ಲಿಂದು ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ, ಲಂಬಾಣಿ ಮಹಿಳೆಯೊಂದಿಗೆ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು. ಈ ಕುರಿತು ಟ್ವೀಟ್ ಮಾಡಿರುವ ವಿಪಕ್ಷ ನಾಯಕ, ಈ ನೆಲ ವೈಶಿಷ್ಟ್ಯಪೂರ್ಣ ಕಲೆ, ಸಂಸ್ಕೃತಿ, ಸಾಹಿತ್ಯದ ತವರು. ಇಲ್ಲಿನ ಪ್ರತಿ ಸಮುದಾಯದ ಆಚರಣೆ, ನಂಬಿಕೆಗಳ ವೈವಿಧ್ಯದಲ್ಲಿಯೇ ವಿಶಿಷ್ಟತೆಯ ಸೊಬಗಿದೆ. ಇದೇ ಪರಂಪರೆಯ ಲಂಬಾಣಿ ಜನರ ವಿಶಿಷ್ಟ ನೃತ್ಯ ಪ್ರಕಾರಕ್ಕಿಂದು ಅವರೊಳಗೊಬ್ಬನಾಗಿ ಹೆಜ್ಜೆಹಾಕಿದ್ದು ಖುಷಿ ನೀಡಿತು ಎಂದು ಬರೆದುಕೊಂಡಿದ್ದಾರೆ.
ನಂತರ ಪ್ರಜಾಧ್ವನಿ ಸಮಾವೇಶದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಮತ್ತು ಮುಂದೆ ನಾವು ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಜಾರಿಗೆ ತರುವ ಜನಪರ ಯೋಜನೆಗಳ ಬಗ್ಗೆ ಸಿದ್ದರಾಮಯ್ಯ ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


